ಬಜ್ಪೆ ಪೋಲೀಸರನ್ನು ಅವಹೇಳನಕಾರಿಯಾಗಿ ನಿಂದನೆ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಬಂಧಿಸಲಾಗಿದೆ.
ಸುರತ್ಕಲ್ ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು ಮಿಸ್ಟರ್ ಅಟಿಟ್ಯೂಡ್ 22 ಎಂಬ ಇನ್ಸ್ಟಗ್ರಾಮ್ ಪೇಜ್ ನಲ್ಲಿ ಬಜ್ಪೆ ನಿಸರ್ಗ ಹೋಟೆಲ್‌ನ ಫೋಟೊ ಬಳಸಿಕೊಂಡು ಅದರ ಮೇಲೆ ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಟ್ಟೆ ಪೊಲೀಸರಿಂದ ರಾಜಾತಿಥ್ಯ, ದಿನಾಲೂ ನಿಸರ್ಗ ಹೋಟೆಲ್ ಬಜ್ಜೆ ಇಂದ ಬೀಫ್ ಊಟವನ್ನು ನೀಡುತ್ತಿದ್ದಾರೆ. ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್ ಅಪರಾಧಿಗಳೊಟ್ಟಿಗೆ ಸೇರಿಕೊಂಡು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ. ಇಲ್ಲಿ ಪೊಲೀಸ್‌ನವರ ಮೇಲೆ ಇಟ್ಟಿರುವ ಭರವಸೆ ಸುಳ್ಳಾಗುತ್ತಿದೆ ಎಂದು ಪೊಲೀಸರನ್ನು ನಿಂದಿಸಿ ಪೋಸ್ಟ್ ಮಾಡಿರುವುದಾಗಿ ದೂರಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಚ್ಛೆ ಪೊಲೀಸರು ಆರೋಪಿ ಅಭಿಷೇಕ್‌ನನ್ನು ಬಂಧಿಸಿದ್ದಾರೆ. ಅಭಿಷೇಕ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ, ಕೊಲೆಯತ್ನ, ಹಲ್ಲೆ ಪ್ರಕರಣ, ಕಾಪು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆಗಾಗಿ ಸೆನ್ ಪೊಲೀಸರ ವಶಕ್ಕೆ ಒಪ್ಪಿಸಿದ್ದು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…