ಬಾಂಗ್ಲಾದೇಶದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆಯನ್ನು ಶಿವಸೇನಾ ಕರ್ನಾಟಕ ಉಗ್ರವಾಗಿ ಖಂಡಿಸಿದೆ.
ಈ ರೀತಿಯ ಕ್ರೂರತ್ವ ಹಾಗೂ ಹಿಂಸೆ ಇಡೀ ಮನುಕುಲಕ್ಕೆ ಅಪಾಯಕಾರಿ, ಈ ರೀತಿ ಜನರು ದಂಗೆಯೆದ್ದು ಒಂದು ನಿರ್ದಿಷ್ಟ ಕೋಮಿನ ವಿರುದ್ದ ಹಿಂಸಾಕೃತ್ಯ ವಿಷಯಗಳಿಗೆ ಇಳಿದಿದ್ದಾರೆ ಅಂದರೆ ಇದರ ನಡುವೆ ಐ ಎಸ್ ಐ ಕೈವಾಡ ಎದ್ದು ಕಾಣುತ್ತಿದೆ ಎಂದು ಶಿವಸೇನೆಯ ಆನಂದ ಶೆಟ್ಟಿ ಅಡ್ಯಾರ್ ಹೇಳಿದ್ದಾರೆ. ರಾಜರೋಷವಾಗಿ ಒಬ್ಬ ಹಿಂದೂವನ್ನು ಕಂಬಕ್ಕೆ ನೇತು ಹಾಕಿ ಹಿಂಸೆಗೆ ಒಳಪಡಿಸಿದ್ದನ್ನು ಗಮನಿಸಿದರೆ ಅಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂದು ತಿಳಿಯುತ್ತಿಲ್ಲ. ಇಂತಹ ನೀಚ ಕೃತ್ಯಗಳ ವಿರುದ್ದ ಇಡೀ ಜಗತ್ತು ಒಂದಾಗಬೇಕಾಗಿದೆ ಯಾವುದೋ ನೆಪದಿಂದ ಹಿಂದೂಗಳ ವಿರುದ್ದ ಹಿಂಸೆಗೆ ಇಳಿದ ಅಲ್ಲಿನ ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಯಾವುದೇ ಕಾರಣಕ್ಕೂ ಇವರನ್ನು ಕ್ಷಮಿಸಕೂಡದು ಈ ವಿಚಾರದಲ್ಲಿ ನಮ್ಮ ದೇಶದ ಪ್ರಧಾನಿಯವರು ಮಧ್ಯ ಪ್ರವೇಶಿಸಿ ಹಿಂದೂಗಳ ಮೇಲಿನ ದೌರ್ಜ್ಯನ್ಯವನ್ನು ಮೊದಲು ತಡೆಗಟ್ಟಬೇಕು ಎಂದು ಶಿವಸೇನಾ ರಾಜ್ಯ ಉಪಾಧ್ಯಕ್ಷ ಆನಂದ್ ಶೆಟ್ಟಿ ಅಡ್ಯಾರ್ ತಿಳಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…