ಕಾರು ಮತ್ತು ಬಸ್ಸು ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾವಗಡ ಪಟ್ಟಣದ ಹೊರವಲಯದ ಕಡಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ಸಂಭವಿಸಿದೆ.
ಪಾವಗಡ ಗ್ರಾಮದ ನಿವಾಸಿ ಚಂದ್ರಶೇಖರ್ ಮೃತ ಕಾರು ಚಾಲಕ. ಇಂದು ಮುಂಜಾನೆ ವೇಳೆ ಪಾವಗಡ ಪಟ್ಟಣದಿಂದ ಆಂಧ್ರದ ಪೆನುಕೊಂಡದ ಕಡೆಗೆ ಹೋಗುವ ರಸ್ತೆಯಲ್ಲಿ ಎದುರುಬದುರಾಗಿ ಬರುತ್ತಿದ್ದ ಕಾರು ಮತ್ತು ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ್ದು, ಕಾರು ನಜ್ಜುಗುಜ್ಜಾಗಿದೆ. ಕಾರು ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ತಕ್ಷಣ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗಿನ ಸಮಯದಲ್ಲಿದ್ದ ದಟ್ಟವಾದ ಮಂಜು ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪಾವಗಡ ಪೊಲೀಸ್ ಠಾಣೆಯ ಸುರೇಶ್ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…