ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ ಕೆಲಸ ಮಾಡಿದ್ದರು. ಸುಮಾರು 30 ವರ್ಷ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಅವರು, ಅಪಾರವಾದ ಬಳಗವನ್ನು ಗಳಿಸಿಕೊಂಡಿದ್ದರು. ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕಾರ್ಯಕಲಾಪಗಳ ವರದಿಗಾಗಿ ತೆರಳಿದ್ದ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದರು. ಕೆಎಸ್‌ಆರ್‌ಟಿಸಿ ಬಸ್ ನಿಂದ ಇಳಿದು, ಬಾಗಲೂರಿನಲ್ಲಿರುವ ತಮ್ಮ ಮನೆ ತಲುಪಲು ಬಿಎಂಟಿಸಿ ಬಸ್ ಹತ್ತಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತವಾಗಿದೆ. ಸಹಪ್ರಯಾಣಿಕರು ಉಪಚರಿಸಿದ ಹೊರತಾಗಿಯೂ ಬಸ್ ನಲ್ಲಿಯೇ ನಿಧನ ಹೊಂದಿದ್ದಾರೆ. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು. ಪ್ರೆಸ್ ಕ್ಲಬ್ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ರಮೇಶ್‌ಪಾಳ್ಯ, ಸಂಘದ ಪದಾಧಿಕಾರಿಗಳು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರೆಸ್‌ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ವರದಿಗಾರರ ಕೂಟದ ಅಧ್ಯಕ್ಷ ಆರ್.ಟಿ.ವಿಠಲ ಮೂರ್ತಿ ಮತ್ತಿತರ ಹಿರಿಯ ಪತ್ರಕರ್ತರು ಶೋಕ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶ ಅ.1ರಿಂದ ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದ ಅಧೀನಕ್ಕೆ…
ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್ ನಡೆಸಿದ ಎನ್ನಲಾದ ವಿಧ್ವಂಸಕ ಕೃತ್ಯದ ಯತ್ನವನ್ನು…
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…