ಪತ್ರಿಕಾ ವಿತರಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಬೈಪಾಸ್ ಎಂಬಲ್ಲಿ ನಡೆದಿದೆ. ಬಂಟ್ವಾಳ ಬಡ್ಡಕಟ್ಟೆ ದೈವಗುಡ್ಡೆ ನಿವಾಸಿ ಪ್ರಶಾಂತ್ ಬಾಳಿಗಾ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.
ಇವರು ಬಂಟ್ವಾಳ ಪೇಟೆಯಲ್ಲಿ ಚಿರಪರಿಚಿತ ಮತ್ತು ಎಲ್ಲರ ಅಚ್ಚುಮೆಚ್ಚಿನ ವ್ಯಕ್ತಿಯಾಗಿದ್ದರು. ಅನೇಕ ವರ್ಷಗಳಿಂದ ಪೇಪರ್ ಮತ್ತು ಹಾಲು ವಿತರಕರಾಗಿದ್ದು ಸಂಜೆ ವೇಳೆ ಪಿಗ್ಮಿ ಸಂಗ್ರಹಕಾ ವೃತ್ತಿಯನ್ನು ಮಾಡಿಕೊಂಡಿದ್ದರು. ಎಂದಿನಂತೆ ಮನೆಯಿಂದ ಪೇಪರ್ ಮತ್ತು ಹಾಲನ್ನು ಮನೆಮನೆಗೆ ವಿತರಣೆ ಮಾಡಲು ಹೊರಟವರು ಸ್ವಲ್ಪ ಹೊತ್ತು ಕೆಲ ಮನೆಗಳಿಗೆ ಹಾಲು ಮತ್ತು ಪೇಪರ್ ಹಾಕಿದ್ದಾರೆ. ಸುಮಾರು ಬೆಳಿಗ್ಗೆ 5 ಗಂಟೆಯಿಂದ 8 ಗಂಟೆಯ ಅವಧಿಯಲ್ಲಿ ಬೈಪಾಸ್‌ನ ಬಾವಿಯೊಂದಕ್ಕೆ ಹಾರಿ ಆತ್ಮ ಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ರಸ್ತೆ ಬದಿಯಲ್ಲಿ ಇವರ ಬೈಕ್ ಅನಾಥವಾಗಿ ನಿಂತಿರುವುದನ್ನು ಸಾರ್ವಜನಿಕರು ಕಂಡು ಅನುಮಾನಗೊಂಡು ಬಾವಿಯಲ್ಲಿ ನೋಡಿದಾಗ ಮೃತದೇಹ ತೇಲಾಡುವ ಸ್ಥಿತಿಯಲ್ಲಿತ್ತು. ಸ್ಥಳೀಯರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಬಂಟ್ವಾಳ ನಗರ ಪೋಲೀಸ್ ಇನ್ಸ್ಪೆಕ್ಟರ್ ಆನಂತಪದ್ಮನಾಭ ಅವರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ಮೂವರು ಪುತ್ರಿಯರು ಹಾಗೂ ಅಪಾರ ಅಭಿಮಾನಿ ಬಂಧುಗಳನ್ನು ಅಗಲಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…