ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್‌ಡಿಎಮ್‌ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟದಲ್ಲಿ ತೊಡಗಿದ್ದ ಕೇರಳದ ಉಪ್ಪಳ, ಮಂಗಲ್ಪಾಡಿ ನಿವಾಸಿ ಶೇಖ್ ಮೊಹಮ್ಮದ್ ಕೈಫ್ ಎಂಬಾತನನ್ನು ಉಳ್ಳಾಲ ಪೊಲೀಸರು ಸೋಮವಾರದಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು ,ಕೃತ್ಯದಲ್ಲಿ ತೊಡಗಿದ್ದ ಮತ್ತಿಬ್ಬರು ಪೆಡ್ಲರ್‌ಗಳು ಪರಾರಿಯಾಗಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಕೈಫ್ ನಿಂದ 55,000/- ರೂಪಾಯಿ ಬೆಲೆ ಬಾಳುವ ನಿಷೇಧಿತ 11 ಗ್ರಾಂ ಎಮ್‌ಡಿಎಮ್‌ಎ ಕ್ರಿಸ್ಟಲ್ ಮತ್ತು ಕೃತ್ಯಕ್ಕೆ ಬಳಸಿದ್ದ 1 ತೂಕ ಮಾಪನ, 500 ರೂ.ನಗದು ಮತ್ತು 1 ಮೊಬೈಲ್ ಫೋನನ್ನು ಪೊಲೀಸರು ಜಪ್ತಿಗೊಳಿಸಿದ್ದಾರೆ. ಸ್ಥಳದಲ್ಲಿದ್ದ ಮತ್ತಿಬ್ಬರು ಡ್ರಗ್ ಪೆಡ್ಲರ್‌ಗಳಾದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಎಂಬವರು ಪರಾರಿಯಾಗಿದ್ದಾರೆ. ಮೊಹಮ್ಮದ್ ಕೈಫ್ ಎಂಬಾತನು ವಿಲಾಸಿ ಜೀವನ ನಡೆಸಲು ಉಪ್ಪಳದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಎಂಬವರೊAದಿಗೆ ಸೇರಿ ಕೆ.ಸಿ ರೋಡ್ ಫಲಾಹ್ ಶಾಲಾ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಪರಿಚಯಸ್ಥ ಗಿರಾಕಿಗಳಿಗೆ ಎಮ್‌ಡಿಎಮ್‌ಎ ಕ್ರಿಸ್ಟಲನ್ನು ಪೂರೈಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಬೈಕಲ್ಲಿ ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಶೇಖ್ ಮೊಹಮ್ಮದ್ ಕೈಫ್‌ನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…