ಬಂಟ್ವಾಳ: ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾವನ್ನು ಬಂಟ್ವಾಳ ಟ್ರಾಫಿಕ್ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂಬವರ ಸ್ಕೂಟರ್‌ಗೆ ಅಪರಿಚಿತ ರಿಕ್ಷಾ ಡಿಕ್ಕಿ ಹೊಡೆದು ಬಳಿಕ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆದರೆ ಎರಡು ಹಿಟ್ ರನ್ ಆಗಿದ್ದ ರಿಕ್ಷಾ ಪತ್ತೆಯಾಗಿರಲಿಲ್ಲ. ರಿಕ್ಷಾ ಡಿಕ್ಕಿಯಾಗಿ ಪರಾರಿಯಾಗಿರುವುದನ್ನು ಅಲ್ಲಿನ ಸ್ಥಳೀಯರು ನೋಡಿದ್ದಲ್ಲದೆ, ಸಿ.ಸಿ.ಕ್ಯಾಮರಾದಲ್ಲಿ ಕೂಡ ಸೆರೆಯಾಗಿದೆ. ಸಿ.ಸಿ.ಕ್ಯಾಮರಾದ ಸಾಕ್ಷ್ಯವನ್ನು ಆದರಿಸಿ ಬೆನ್ನು ಹತ್ತಿದ ಟ್ರಾಫಿಕ್ ಪೋಲೀಸರು ಮಂಗಳೂರಿನಲ್ಲಿ ರಿಕ್ಷಾವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಸಜೀಪ ನಿವಾಸಿ ಕುಮರೇಶ್ ಎಂಬವರನ್ನು ಪೋಲೀಸರು ಪತ್ತೆ ಹಚ್ಚಿ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…