ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ದಿ.ಬಟ್ಯ ನಾಯ್ಕರ ಮನೆಯ ಬಾವಿಯೊಳಗೆ ಪುರುಷನ ಮೃತದೇಹ ಪತ್ತೆ!

ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಲ್ಲಮಜಲು-ಸೆರ್ಕಳ ರಸ್ತೆಯ ವಾಸವ್ಯವಿಲ್ಲದ ದಿ.ಬಟ್ಯ ನಾಯ್ಕರ ಮನೆಯ ಬಾವಿಯೊಳಗೆ ಪುರುಷನ ಮೃತದೇಹ ಪತ್ತೆಯಾಗಿತ್ತು.

ಇದು ಹಲವು ಸಮಯಗಳ ಹಿಂದೆ ನಾಪತ್ತೆಯಾಗಿದ್ದ ಕೊಳ್ನಾಡು ನಿವಾಸಿ ಪೂವಪ್ಪ ಪೂಜಾರಿ ಅವರ ಶವ ಎಂದು ಗುರುತು ಪತ್ತೆಹಚ್ಚಲಾಗಿದೆ. ಸ್ಥಳೀಯರಿಗೆ ದುರ್ವಾಸನೆ ಬಂದ ಕಾರಣ ಹುಡುಕಾಡಿದಾಗ ವಾಸ್ತವ್ಯವಿಲ್ಲದ ಪಾಳು ಬಿದ್ದ ಮನೆಯಂಗಳದ ಬಾವಿಯಲ್ಲಿ ಶವ ಕಂಡುಬಂದಿತ್ತು. ತಕ್ಷಣವೇ ಸ್ಥಳೀಯರು ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದವರು ಸ್ಥಳಕ್ಕಾಗಮಿಸಿ 57 ಅಡಿ ಆಳದ ಬಾವಿಯೊಳಗೆ ಇದ್ದ ಶವ ಮೇಲಕ್ಕೆತ್ತಿದ್ದಾರೆ. ಫ್ರೆಂಡ್ಸ್ ವಿಟ್ಲ ತಂಡದ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದು, ಸ್ಥಳೀಯರು ಸಹಕಾರ ನೀಡಿದ್ದಾರೆ. ಪೂವಪ್ಪ ಪೂಜಾರಿ ಆತ್ಮಹತ್ಯೆ ಬಗ್ಗೆ ಪತ್ನಿ ಸುಶೀಲಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!