ಕರಾವಳಿ

ಉಡುಪಿ: ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಕಳ್ಳಿಯರ ಬಂಧನ….!

ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವದಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಮೂರು ಮಂದಿ ಕಳ್ಳಿಯರನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ ಬೀದಿಯ ಶೀಥಲ್, ಕಾಳಿಯಮ್ಮ ಹಾಗೂ ಮಾರಿ ಬಂಧಿತ ಆರೋಪಿಗಳು. ಹೆಜಮಾಡಿಯ ಕಮಲ ಎಂಬವರು ಮನೆಯ ಬಳಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸಕ್ಕೆ ಹೋಗಿದ್ರು. ಅಲ್ಲಿಗೆ ಬಂದ ಈ ಮೂವರು ಕಳ್ಳಿಯರು ಜನಸಂದಣಿಯ ಮಧ್ಯೆಯೇ ಕಮಲ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ. ಚಿನ್ನದ ಸರ ಕಳವಾಗಿರುವುದು ಗಮನಕ್ಕೆ ಬಂದಾಗ ದೇವಸ್ಥಾನದ ಆಡಳಿತ ಮಂಡಳಿಗೆ ವಿಷಯ ತಿಳಿಸಿದ್ದು, ಅವರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮೂರು ಅಪರಿಚಿತ ಮಹಿಳೆಯರು ಚಿನ್ನದ ಸರವನ್ನು ಕಳವು ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದರಂತೆ ತನಿಖೆ ನಡೆಸಿದ ಪೊಲೀಸರು, ಮೂವರು ಆರೋಪಿಗಳನ್ನು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಟಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು ಕೊಂಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

2 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

3 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

7 days ago