ಬೆಂಗಳೂರಿನಲ್ಲಿ ತಡರಾತ್ರಿ ಯುವತಿಗೆ ಪುಂಡರು ಕಿರುಕುಳ ನೀಡಿದ ಘಟನೆ ಬಿಟಿಎಂ ಲೇ ಔಟ್‌ನಲ್ಲಿ ನಡೆದಿದೆ.
ದುಷ್ಟರ ವಿರುದ್ಧ ಕ್ರಮಕ್ಕೆ ಆಗ್ರಹ ಜೋರಾಗಿದ್ದು, ಯುವತಿ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ವೇಳೆ ಇತ್ತ ಒಂದು ಬೈಕ್‌ನಲ್ಲಿ ಮೂವರು ಪುಂಡರು ಅಡ್ಡಾದಿಡ್ಡಿ ಬೈಕ್ ಚಾಲನೆ ಮಾಡಿದ್ದಾರೆ. ಹೆಲ್ಮೆಟ್ ಕೂಡ ಧರಿಸದ ಪುಂಡರು ಬೇಕು ಅಂತಾನೆ ಬೈಕ್ ಅಲ್ಲಿ ಮುಂದೆ ಹೋಗಿ ಅಡ್ಡಾದಿಡ್ಡಿ ಚಾಲನೆ ಮಾಡಿದ್ದಾರೆ. ಸುಮಾರು ಎರಡು ಕಿಲೋ ಮೀಟರ್ ದೂರದವರೆಗೂ ಯುವತಿಯನ್ನ ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಯುವತಿಗೆ ಕಿರುಕುಳ ಕೊಡೋ ವೀಡಿಯೋವನ್ನ ಕಾರಿನಲ್ಲಿ ಹಿಂದೆ ಬರ್ತಾ ಇದ್ದ ವ್ಯಕ್ತಿ ಚಿತ್ರೀಕರಣ ಮಾಡಿದ್ದಾರೆ. ಬಳಿಕ ವೀಡಿಯೋ ಸಮೇತ ಪೊಲೀಸರಿಗೆ ಎಕ್ಸ್ನಲ್ಲಿ ಟ್ಯಾಗ್ ಮಾಡಿ, ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಸುದ್ದುಗುಂಟೆ ಪಾಳ್ಯ ಪೊಲೀಸರು ಉತ್ತರ ನೀಡಿದ್ದು, ಕಿಡಿಗೇಡಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಈಗಾಗಲೇ ಬೈಕ್ ನಂಬರ್ ಪತ್ತೆ ಮಾಡಿದ್ದು, ಮೂವರನ್ನು ವಿಚಾರಣೆ ಮಾಡ್ತೀವಿ ಎಂದಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…