ಪಟ್ಟಣದ ಹೊರವಲಯದ ಚಿನ್ನಾಭರಣ ಅಂಗಡಿಗೆ ಕನ್ನ ಹಾಕಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಹಾಡು ಹಗಲು ಸಂಭವಿಸಿದೆ.
ಹುಣಸೂರಿನ ಬಸ್ ನಿಲ್ದಾಣದ ಹಿಂಭಾಗವಿರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಅಂಗಡಿಯ ಮೇಲೆ ಐದು ಮಂದಿ ಮುಸುಕುದಾರಿಗಳು ಅಂಗಡಿ ಮ್ಯಾನೇಜರ್ ಅಜ್ಗರ್ ಮೇಲೆ ರಿವಾಲ್ವಾರ್‌ನಿಂದ ಗುಂಡು ಹಾರಿಸಿ ದರೋಡೆ ಮಾಡಿದ್ದಾರೆ. ಸುಮಾರು 4-5 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ದರೋಡೆಕೋರರು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಿಂದ ತಪ್ಪಿಸಿಕೊಂಡ ಅಜ್ಗರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ದರೋಡೆಕೋರರು ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಬ್ಯಾಗ್‌ಗಳಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ.
ಘಟನೆಯ ಸಮಯದಲ್ಲಿ ಅಂಗಡಿಯಲ್ಲಿ ಕೆಲವು ಗ್ರಾಹಕರು ಮತ್ತು ಸಿಬ್ಬಂದಿ ಇದ್ರು, ದರೋಡೆಕೋರರು ಎಲ್ಲರನ್ನೂ ಬೆದರಿಕೆ ಹಾಕಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ನಂತರ ಒಬ್ಬ ದರೋಡೆಕೋರ ಮಾತ್ರ ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದಾನೆ. ಇತರರು ಮುಸುಕು ಧರಿಸಿದ್ದು, ಈ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ದರೋಡೆಕೋರರ ಬಂಧನದ ಕಾರ್ಯಾಚರಣೆಗೆ ಇಳಿದಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…