ಮಂಗಳೂರು – ಬೆಂಗಳೂರು ರೈಲು ಮಾರ್ಗದ ಮೈಸೂರು ವಿಭಾಗದ ನೈರುತ್ಯ ರೈಲ್ವೆಯಲ್ಲಿ ಘಾಟ್ ವಿಭಾಗದ ವಿದ್ಯುದೀಕರಣ ಪೂರ್ಣಗೊಂಡಿದೆ.
ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಇದು ರೈಲು ಮೂಲಸೌಕರ್ಯವನ್ನು ಬಲಪಡಿಸುವ ಮಹತ್ವದ ಮೈಲಿಗಲ್ಲಾಗಿದೆ. ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ 55 ಕಿ.ಮೀ. ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ ಸವಾಲಿನ ವಿಭಾಗಗಳಲ್ಲಿ ಒಂದಾಗಿದೆ.
ಈ ಮಾರ್ಗದಲ್ಲಿ 1ಕ್ಕೆ 50ರಷ್ಟು ಗ್ರೇಡಿಯಂಟ್, 57 ಸುರಂಗಗಳು, 258 ಸೇತುವೆಗಳು, 108 ತೀಕ್ಷ್ಣ ವಕ್ರಗಳು ಇರುವುದರ ಜೊತೆಗೆ, ಭೂಕುಸಿತಗಳಿಗೆ ಹೆಚ್ಚು ಒಳಪಡುವ ಪ್ರದೇಶವಾಗಿರುವುದರಿಂದ, ವಿದ್ಯುದೀಕರಣ ಕಾರ್ಯವು ಅತ್ಯಂತ ಸಂಕೀರ್ಣವಾಗಿತ್ತು. ವಿದ್ಯುದೀಕರಣ ಕಾರ್ಯವು 2023ರ ಡಿಸೆಂಬರ್ 1ರಂದು ಆರಂಭಗೊಂಡು, ರೂ.93.55 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದೆ. ಈ ಯೋಜನೆಯಡಿ ಮಾರ್ಗದೊಳಗೆ ಐದು ಸ್ವಿಚಿಂಗ್ ಸ್ಟೇಷನ್‌ಗಳ ನಿರ್ಮಾಣ ಹಾಗೂ ಸಂಪೂರ್ಣ ವಿಭಾಗದಲ್ಲಿ ಮೇಲ್ಮೈ ವಿದ್ಯುದೀಕರಣ ಕಾರ್ಯ ಕೈಗೊಳ್ಳಲಾಗಿದೆ. ಮೇಲ್ಮೈ ವಿದ್ಯುತ್ ವ್ಯವಸ್ಥೆಯನ್ನು ಗರಿಷ್ಠ 120 ಕಿ.ಮೀ. ಪ್ರತಿ ಗಂಟೆ ವೇಗಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದ್ದು, ಎರಡು ವಿದ್ಯುತ್ ಕಂಬಗಳ ನಡುವಿನ ಗರಿಷ್ಠ ಅಂತರವನ್ನು 67.5 ಮೀಟರ್‌ಗೆ ಮಿತಿಗೊಳಿಸಲಾಗಿದೆ. ಇದರಿಂದ ಕಾರ್ಯಾಚರಣಾ ಸುರಕ್ಷತೆ ಮತ್ತು ವಿಶ್ವಾಸಾರ್ಹತೆ ಖಚಿತಗೊಂಡಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…