ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ ಪ್ರಾಥಮಿಕ ಅರೋಗ್ಯ ಕೇಂದ್ರದ ಸಮೀಪ ನಡೆದ ಬೈಕ್ ಹಾಗೂ ಕಾರ್ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಕುಕ್ಕಾಜೆ ನಿವಾಸಿ ಇಮ್ರಾನ್ ಮೃತಪಟ್ಟವರು. ಅವರು ಟಾಟಾ ಕಂಪನಿಯ ಡಿಶ್ ರಿಪೇರಿ ಟೆಕ್ನಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಯ ನಿಮಿತ್ತ ತೆರಳಿದವರು ವಾಪಾಸು ಬಿ.ಸಿ.ರೋಡ್ ಕಡೆ ಬರುತ್ತಿದ್ರು, ಮಂಗಳೂರು ಕಡೆಯಿಂದ ಪೊಲೀಸ್ ಓರ್ವರು ಚಲಾಯಿಸುತ್ತಿದ್ದ ನ್ಯಾನೋ ಕಾರ್ ನಿಯಂತ್ರಣ ತಪ್ಪಿ ಹೆಗ್ಗಡೆಬೆಟ್ಟು ಮನೆ ಬಳಿ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಇಮ್ರಾನ್ ಬೈಕ್ ನಿಂದ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ತತ್ ಕ್ಷಣ ಸ್ಥಳೀಯರು ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಮೂಲತಃ ಮಾರ್ನಬೈಲ್‌ನವರಾದ ಅವರು ಕುಕ್ಕಾಜೆಯಲ್ಲಿ ಮನೆ ನಿರ್ಮಿಸಿದ್ದರು. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…