ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಲಾರಿ ಚಾಲಕ ಹಾಗೂ ಕ್ಲೀನರ್ ಟೋಲ್ ಗೇಟ್‌ಗೆ ಹಾನಿ ಮಾಡಿ ಸಿಬ್ಬಂದಿಗೆ ಹಲ್ಲೆ….!!

ಬಿ.ಸಿ.ರೋಡು ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಆರೋಪಿಗಳಾದ ಲಾರಿ ಚಾಲಕ ಹಾಗೂ ಕ್ಲೀನರ್ ಟೋಲ್ ಗೇಟ್‌ಗೆ ಹಾನಿ ಮಾಡಿ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು ಮೂಲದ ಲಾರಿ ಚಾಲಕ ಭರತ್ ಹಾಗೂ ಕ್ಲೀನರ್ ತೇಜಸ್ ಪ್ರಕರಣದ ಆರೋಪಿಗಳಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಟೋಲ್ ಮೇಲ್ವಿಚಾರಕ ಕಾಸರಗೋಡಿನ ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ. ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳು ಟಾಟಾ ಲಾರಿಯಲ್ಲಿ ಟೋಲ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದಿದ್ದು, ಟೋಲ್ ಸಿಬ್ಬಂದಿ ಹಣ ಕೇಳಿದಾಗ ಲಾರಿಯನ್ನು ಮುಂದಕ್ಕೆ ಚಲಾಯಿಸಿಕೊಂಡು ಹೋಗಿ ಟೋಲ್ ಗೇಟ್‌ಗೆ ಹಾನಿ ಮಾಡಿದ್ದಾರೆ. ಬಳಿಕ ಚಾಲಕ ಹಾಗೂ ಕ್ಲೀನರ್ ಟೋಲ್ ಸಿಬ್ಬಂದಿ ಅಂಕಿತ್ ಹಾಗೂ ರೋಹಿತ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಬಳಿಕ ಇನ್ನೊಂದು ಪಿಕ್ ಅಪ್ ವಾಹನದಲ್ಲಿದ್ದ ಇಬ್ಬರನ್ನು ಕರೆದುಕೊಂಡು ಟೋಲ್ ಬೂತ್‌ಗೆ ಅಕ್ರಮವಾಗಿ ಪ್ರವೇಶಿಸಿ ಮತ್ತೆ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾರೆ. ಈ ಕುರಿತ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!