ಬಿ.ಸಿ.ರೋಡು ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಆರೋಪಿಗಳಾದ ಲಾರಿ ಚಾಲಕ ಹಾಗೂ ಕ್ಲೀನರ್ ಟೋಲ್ ಗೇಟ್‌ಗೆ ಹಾನಿ ಮಾಡಿ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.
ಚಿಕ್ಕಮಗಳೂರು ಮೂಲದ ಲಾರಿ ಚಾಲಕ ಭರತ್ ಹಾಗೂ ಕ್ಲೀನರ್ ತೇಜಸ್ ಪ್ರಕರಣದ ಆರೋಪಿಗಳಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಟೋಲ್ ಮೇಲ್ವಿಚಾರಕ ಕಾಸರಗೋಡಿನ ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ. ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳು ಟಾಟಾ ಲಾರಿಯಲ್ಲಿ ಟೋಲ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದಿದ್ದು, ಟೋಲ್ ಸಿಬ್ಬಂದಿ ಹಣ ಕೇಳಿದಾಗ ಲಾರಿಯನ್ನು ಮುಂದಕ್ಕೆ ಚಲಾಯಿಸಿಕೊಂಡು ಹೋಗಿ ಟೋಲ್ ಗೇಟ್‌ಗೆ ಹಾನಿ ಮಾಡಿದ್ದಾರೆ. ಬಳಿಕ ಚಾಲಕ ಹಾಗೂ ಕ್ಲೀನರ್ ಟೋಲ್ ಸಿಬ್ಬಂದಿ ಅಂಕಿತ್ ಹಾಗೂ ರೋಹಿತ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಬಳಿಕ ಇನ್ನೊಂದು ಪಿಕ್ ಅಪ್ ವಾಹನದಲ್ಲಿದ್ದ ಇಬ್ಬರನ್ನು ಕರೆದುಕೊಂಡು ಟೋಲ್ ಬೂತ್‌ಗೆ ಅಕ್ರಮವಾಗಿ ಪ್ರವೇಶಿಸಿ ಮತ್ತೆ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾರೆ. ಈ ಕುರಿತ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…