ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭೀಕರ ಅಪಾಘಾತ ಸಂಭವಿಸಿ ಎರಡು ಬಸ್‌ಗಳು ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ನಡೆದಿದೆ.
ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಸ್ಲೀಪರ್ ಬಸ್‌ಗೆ ಹಿಂದೆಯಿಂದ ಬಂದ ಮತ್ತೊಂದು ಸ್ಲೀಪರ್ ಬಸ್ ಡಿಕ್ಕಿ ಹೊಡಿದಿದೆ. ಅತೀ ವೇಗವೇ ಅಪಘಾತಕ್ಕೆ ಮುಖ್ಯ ಕಾರಣ ಎಂದು ಶಂಕಿಸಲಾಗಿದೆ. ಅಪಘಾತದಿಂದ ಎರಡು ಸ್ಲೀಪರ್ ಬಸ್‌ಗಳು ತೀವ್ರವಾಗಿ ಜಖಂಗೊಂಡಿವೆ. ಬಸ್‌ಗಳಲ್ಲಿ ಹಲವರು ಪ್ರಯಾಣಿಸುತ್ತಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…
ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು…