ಶಿರ್ವ ಸಹಿತ ಕಾಪು, ಬೆಂಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಐದು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪಿಯನ್ನು ಶಿರ್ವ ಪೋಲಿಸರು ಬಂಧಿಸಿದ್ದಾರೆ.
ಡಿ.5ರಂದು ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕಿಂಗ್ ಮಾಡಿದ್ದ ವಾಹನ ಕಳವಾದ ಬಗ್ಗೆ ಮಹಿಳೆಯೋರ್ವರು ನೀಡಿದ ದೂರಿನಂತೆ ಶಿರ್ವ ಪೋಲಿಸರು ತನಿಖೆ ಆರಂಭಿಸಿದ್ದಾರೆ. ಶಿರ್ವ ಪೊಲೀಸರಿಂದ ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಈ ತಂಡವು ಉಡುಪಿ, ಮಲ್ಪೆ ಕಾರ್ಕಳ, ಧರ್ಮಸ್ಥಳ ಕಡೆಗಳಲ್ಲಿ ಸಂಚರಿಸಿ ಆರೋಪಿ ಓಂ ಕೋಲಾರ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ಶಿರ್ವ ಪೊಲೀಸ್ ಠಾಣೆಗೆ ಸಂಬಂಧಿಸಿದ ಒಂದು ದ್ವಿಚಕ್ರ ವಾಹನ ಹಾಗೂ ಇತರೆ ಕಾಪು, ಬೆಂಗಳೂರು ನಗರದಲ್ಲಿನ ಪೊಲೀಸ್ ಠಾಣೆಗಳಿಗೆ ಸಂಬಂಧಿಸಿದ ಒಟ್ಟು ಐದು ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…