ಉಪ್ಪಿನಂಗಡಿ: ಮೃತದೇಹವೊಂದು ತೇಲಿ ಹೋದ ಬಗ್ಗೆ ಸುದ್ದಿ ಹರಡಿದ್ದು, ಗೃಹ ರಕ್ಷಕದಳದವರನ್ನೊಳಗೊಂಡ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದ ಸದಸ್ಯರು ನದಿಯಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಮೃತದೇಹ ಪತ್ತೆಯಾಗದೇ ಅವರು ವಾಪಸ್ ಮರಳಿದ ಘಟನೆ ಜು.27ರಂದು ಸಂಜೆ ನಡೆದಿದೆ. ದೇವಾಲಯದ ಹಿಂಬದಿಯಲ್ಲಿರುವ ಕುಮಾರಧಾರ ನದಿಯಲ್ಲಿ ಮೃತದೇಹವೊಂದು ತೇಲಿ ಹೋಗುತ್ತಿರುವುದನ್ನು ಸಾರ್ವಜನಿಕರು ಕಂಡಿದ್ದು, ಕೂಡಲೇ ಅಲ್ಲೇ ಸಮೀಪದಲ್ಲೇ ಇರುವ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದವರಿಗೆ ವಿಷಯ ಮುಟ್ಟಿಸಿದರು.
ಸಾರ್ವಜನಿಕರು ನೀಡಿದ ಮಾಹಿತಿಯನ್ನಧಾರಿಸಿ ತಕ್ಷಣವೇ ಕಾರ್ಯಪ್ರವೃತರಾದ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದ ಸದಸ್ಯರು ತಮ್ಮಲ್ಲಿರುವ ರಬ್ಬರ್ ಬೋಟಿನಲ್ಲಿ ನದಿಯಲ್ಲಿ ಸುಮಾರು ನಾಲ್ಕು ಕಿಲೋಮೀಟರ್ ತನಕ ಹೋಗಿ ಹುಡುಕಾಟ ನಡೆಸಿದರೂ ಅವರಿಗೆ ಮೃತದೇಹ ಪತ್ತೆಯಾಗದ್ದರಿಂದ ಮತ್ತೆ ವಾಪಸ್ ಮರಳಿದರು.
ಆ ಬಳಿಕ ಈ ವಿಷಯ ಚರ್ಚೆಗೆ ಆಸ್ಪದ ನೀಡಿದ್ದು, ಕೆಲವರು ಕುಮಾರಧಾರ ಸೇತುವೆಯಿಂದ ಯಾರಾದರೂ ಹಾರಿರಬಹುದು ಎಂದರೆ, ಇನ್ನು ಕೆಲವರು ಎಲ್ಲೋ ನೀರಿಗೆ ಬಿದ್ದವರ ಮೃತದೇಹವಾಗಿರಬಹುದೆಂದು ಶಂಕಿಸುತ್ತಿದ್ದಾರೆ. ನದಿಯಲ್ಲಿ ಮೃತದೇಹ ತೇಲುತ್ತಿದೆ ಎಂದು ಹೇಳಿದ ಸಾರ್ವಜನಿಕರು ಬೇರೇನ್ನನ್ನೋ ಮೃತದೇಹವೆಂದು ಭ್ರಮಿಸಿದ್ದಾರೋ ಎಂಬ ಸಂಶಯನೂ ಇಲ್ಲಿ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ., ಉಪ್ಪಿನಂಗಡಿ ಕಂದಾಯ ಹೋಬಳಿಯ ಉಪತಹಶೀಲ್ದಾರ್ ಚೆನ್ನಪ್ಪ ಗೌಡ, ತಂಡದಲ್ಲಿ ಗ್ರಾಮ ಸಹಾಯಕ ಯತೀಶ್ ಮಡಿವಾಳ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.ಹುಡುಕಾಟದ ಗೃಹರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್, ಎಎಸ್ಎಲ್ ಜನಾರ್ದನ ಆಚಾರ್ಯ, ಅಣ್ಣು, ಡೀಕಯ್ಯ ಇದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…