ಕರಾವಳಿ

ಮಂಗಳೂರು: 6ನೇ ವಯಸ್ಸಿನಲ್ಲೇ ಪರ್ವತಾರೋಹಣ ಆರಂಭಿಸಿದ ಅಯಾನ್ ಮೆಂಡನ್….!

ಮೂಲತಹ ಮಂಗಳೂರು ಮೂಲದ ಕುಟುಂಬ ದುಬೈನಲ್ಲಿ ನೆಲೆಸಿದ್ದು ಆ ಕುಟುಂಬದ ಕುಡಿ, 11ರ ಹರೆಯದ ಪೋರ ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದಿದ್ದಾನೆ.

ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ತಾಂಜಾನಿಯಾದ ಕಿಲಿಮಂಜಾರೋ ಹತ್ತಿ ದಾಖಲೆ ಮಾಡಿದ್ದ ಅಯಾನ್ ಮೆಂಡನ್, ಇದೀಗ ಜಗತ್ತಿನ ಮೂರನೇ ಅತಿ ಎತ್ತರದ ಕೆನ್ಯಾದಲ್ಲಿರುವ ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಸಾಧನೆ ಮಾಡಿದ್ದಾನೆ. ಮಂಗಳೂರಿನ ಅತ್ತಾವರ ಮೂಲದ ವಾಣಿ ಮೆಂಡನ್ ಎಂಬವರ ಪುತ್ರನಾಗಿರುವ ಅಯಾನ್ ಮೆಂಡನ್ ತನ್ನ 6ನೇ ವಯಸ್ಸಿನಲ್ಲೇ ಪರ್ವತಾರೋಹಣ ಆರಂಭಿಸಿದ್ದಾನೆ. ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ಕಿಲಿಮಂಜಾರೋವನ್ನು 2022ರ ಆಗಸ್ಟ್ 4ರಂದು ಏರಿದ್ದು, ಈ ಸಾಧನೆ ಮಾಡಿದ ಜಗತ್ತಿನ ಅತಿ ಕಿರಿಯ ಸಾಧಕ ಎಂಬ ಹೆಗ್ಗಳಿಕೆ ಗಳಿಸಿದ್ದಾನೆ. ತನ್ನ 9ನೇ ವಯಸ್ಸಿನಲ್ಲಿ ಅಮೆರಿಕದ ಅತಿ ಎತ್ತರದ ಪರ್ವತ ಅಕಾಂಕಾಗುವಾ ಏರಿದ್ದು, ಇದನ್ನೂ ಅತಿ ಕಿರಿಯ ವಯಸ್ಸಿನಲ್ಲಿ ಏರಿದ ಬಾಲಕನೆಂಬ ಕೀರ್ತಿಗೆ ಪಾತ್ರನಾಗಿದ್ದಾನೆ. ಇದೀಗ 11ನೇ ವಯಸ್ಸಿನಲ್ಲಿ 2025ರ ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾನೆ. ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್, ಮೌಂಟ್ ಎಲ್ ಬ್ರಸ್, ಅನ್ನಪೂರ್ಣ ಬೇಸ್ ಕ್ಯಾಂಪ್ ಸೇರಿದಂತೆ ಈಗಾಗಲೇ ಜಗತ್ತಿನ ಎತ್ತರದ ಶಿಖರಗಳನ್ನು ಅಯಾನ್ ಮೆಂಡನ್ ಏರಿದ್ದಾನೆ. ಆ ಮೂಲಕ ಸಾಮಾನ್ಯ ಜನರು ಊಹಿಸುವುದಕ್ಕೂ ಸಾಧ್ಯವಾಗದ ಎತ್ತರಗಳನ್ನು ತನ್ನ ಸಣ್ಣ ವಯಸ್ಸಿನಲ್ಲೇ ಏರುವ ಮೂಲಕ ಜಗತ್ತಿನ ಗಮನ ಸೆಳೆದಿದ್ದಾನೆ. ಇದಕ್ಕಾಗಿ ಹೆತ್ತವರ ನಿರಂತರ ಬೆಂಬಲದೊಂದಿಗೆ ನುರಿತ ತಜ್ಞರಿಂದ ಅವಿರತ ತರಬೇತಿಯನ್ನೂ ಪಡೆಯುತ್ತಿದ್ದಾನೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

1 day ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

2 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

2 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

4 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

5 days ago