ತೆಲಂಗಾಣದ ಖಮ್ಮಂ ಜಿಲ್ಲೆಯ ಪೆನುಬಳ್ಳಿ ಮಂಡಲದ ಗಣೇಶಪಾಡು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸುಮಾರು 100 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಾಲುವೆಗೆ ಉರುಳಿದೆ. ಮದ್ದುಲಗುಡೆಮ್‌ದ ವಿವೇಕಾನಂದ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಹೊರಟಿದ್ದ ಶಾಲಾ ಬಸ್ ಅಪಘಾತಕ್ಕೆ ಒಳಗಾಗಿದೆ. ಸ್ಕೂಲ್ ಮುಗಿದ ಬಳಿಕ ಗಣೇಶಪಾಡು, ಎಲ್.ಎಸ್. ಬಂಜಾರ್, ಕೆ.ಎಂ. ಬಂಜಾರ್, ಮರ್ಲಕುಂಟ ಮತ್ತು ಮುತ್ತುಗುಡೆಮ್ ನಿಂದ ವಿದ್ಯಾರ್ಥಿಗಳು ಬಸ್ಸಿನ ಮೂಲಕ ಮನೆಗಳಿಗೆ ತೆರಳುತ್ತಿದ್ದರು. ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಗಣೇಶಪಡು ಗ್ರಾಮದ ಹೊರವಲಯಕ್ಕೆ ಬಸ್ಸು ಬರುವಾಗ ಕಾಲುವೆಗೆ ಉರುಳಿದೆ. ಚಾಲಕ ವೇಗವಾಗಿ ಚಾಲನೆ ಮಾಡುತ್ತಿದ್ದ. ಅಪಘಾತದಲ್ಲಿ ಸುಮಾರು 40 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕ ಅತಿ ವೇಗವಾಗಿ ಬಸ್ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಬಸ್ಸು ಕಾಲುವೆಗೆ ಉರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…