ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು, 17 ಬೋಟ್‌ಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಾವಂಜೆ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದಲ್ಲಿದ್ದ ನದಿಗಳಲ್ಲಿ ಬೋಟ್‌ಗಳನ್ನು ಉಪಯೋಗಿಸಿಕೊಂಡು ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಮಾಹಿತಿ ಲಭ್ಯವಾದ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮರಳುಗಾರಿಕೆಗೆ ಉಪಯೋಗಿಸಿದ್ದ 17 ಬೋಟ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಕಾರ್ಯಾಚರಣೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಭಾಗವಹಿಸಿದ್ದು, ತನಿಖೆ ಮುಂದುವರೆದಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…