ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮುಸ್ಲಿಂ ಪೇಜ್ ಹೆಸರಲ್ಲಿ ಸಂಘ ಪರಿವಾರದ ಬಗ್ಗೆ ಪ್ರಚೋದನಕಾರಿ ಪೋಸ್ಟ್….!

ಸುಹಾಸ್ ಶೆಟ್ಟಿ ರೀತಿ ಟ್ರೇಟೆಂಟ್.. ಎಂದು ಮುಸ್ಲಿಂ ಪೇಜ್ ಹೆಸರಲ್ಲಿ ಸಂಘ ಪರಿವಾರದ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿ ಆರೋಪಿಗಳಿಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.

ಬಜಪೆಯಲ್ಲಿ ಗೋಮಾಂಸ ಒಯ್ಯುತ್ತಿದ್ದ ತಂದೆ, ಮಗಳನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರ ಫೋಟೊ ಹಾಕಿ ಮಿತಿ ಮೀರುತ್ತಿರುವ ಸಂಘಗಳ ಅಟ್ಟಹಾಸ ಎಂದು ಬರೆದು ಪ್ರಚೋದನಕಾರಿ ಸಂದೇಶ ಹಾಕಿದ ಬಗ್ಗೆ ಮಂಗಳೂರು ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿದ್ದಾರೆ. ಅವರನ್ನು ಏನು ಮಾಡುವುದಿಲ್ಲ ಅವರನ್ನು ಕೇಳುವವರು ಇಲ್ಲ ಹೇಳುವವರಿಲ್ಲ ಎಂಬ ಧೈರ್ಯ ಅವರಿಗಿದೆ ನಾವು ಆಡಿದ್ದೇ ಆಟ ಎಂಬಂತಾಗಿದೆ ಇನ್ನು ಗೋಮಾಂಸಕ್ಕೆ ಸಂಬಂಧಿಸಿ ಸಂಘ ಪರಿವಾರದ ಭಯೋತ್ಪಾದಕರ ದಾಳಿ ಈಗೀಗ ಹೆಚ್ಚುತ್ತಲೇ ಇದೆ, ಅವರಿಗೆ ಕಾನೂನಿನ ಭಯವಿಲ್ಲ ಎಂದು ಪೋಸ್ಟ್ ನಲ್ಲಿ ಹೇಳಲಾಗಿದೆ. ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿ. 27 ರಂದು ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬಾತ ತನ್ನ ಮಗಳ ಜೊತೆಗೆ ಸ್ಕೂಟರ್‌ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವೇಳೆ, ಸುಮಿತ್ ಮತ್ತು ರಜತ್ ನಾಯಕ್ ಎಂಬವರು ತಡೆದು ನಿಲ್ಲಿಸಿ ಹಲ್ಲೆ ಮಾಡಿದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ. ಸದ್ರಿ ಘಟನೆಗೆ ಸಂಬಂಧಿಸಿದಂತೆ ಇನ್ ಸ್ಟಾ ಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮ್ ಲೀಡರ್ ಎಂಬ ಹೆಸರಲ್ಲಿ ಪ್ರಚೋದನಕಾರಿ ಸಂದೇಶ ಹಾಕಲಾಗಿದೆ. ಇಬ್ಬರು ಯುವಕರ ಪೋಟೋವನ್ನು ಹಾಕಲಾಗಿದೆ. ಇನ್ನು ಗೋಮಾಂಸ ತಿನ್ನುತ್ತೇವೆ, ಸಂಘಗಳೇ ಏನು ಮಾಡುತ್ತೀರಾ.. ಥೂ.. ನಿಮ್ಮ ಜನ್ಮಕ್ಕೆ. ಹದಿಹರೆಯದ ಮಕ್ಕಳನ್ನು ಕೂಡ ನೀವು ನೋಡುವುದಿಲ್ಲ. ನಿಮ್ಮ ಮನೆಯಲ್ಲಿ ಮಕ್ಕಳು ಇಲ್ಲವೇ.. ಸರ್ಕಾರ ಆದಷ್ಟು ಬೇಗ ಈ ನಾಯಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಎಂದೂ ಅದರಲ್ಲಿ ಹೇಳಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!