ಸುಹಾಸ್ ಶೆಟ್ಟಿ ರೀತಿ ಟ್ರೇಟೆಂಟ್.. ಎಂದು ಮುಸ್ಲಿಂ ಪೇಜ್ ಹೆಸರಲ್ಲಿ ಸಂಘ ಪರಿವಾರದ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿ ಆರೋಪಿಗಳಿಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.
ಬಜಪೆಯಲ್ಲಿ ಗೋಮಾಂಸ ಒಯ್ಯುತ್ತಿದ್ದ ತಂದೆ, ಮಗಳನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರ ಫೋಟೊ ಹಾಕಿ ಮಿತಿ ಮೀರುತ್ತಿರುವ ಸಂಘಗಳ ಅಟ್ಟಹಾಸ ಎಂದು ಬರೆದು ಪ್ರಚೋದನಕಾರಿ ಸಂದೇಶ ಹಾಕಿದ ಬಗ್ಗೆ ಮಂಗಳೂರು ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿದ್ದಾರೆ. ಅವರನ್ನು ಏನು ಮಾಡುವುದಿಲ್ಲ ಅವರನ್ನು ಕೇಳುವವರು ಇಲ್ಲ ಹೇಳುವವರಿಲ್ಲ ಎಂಬ ಧೈರ್ಯ ಅವರಿಗಿದೆ ನಾವು ಆಡಿದ್ದೇ ಆಟ ಎಂಬಂತಾಗಿದೆ ಇನ್ನು ಗೋಮಾಂಸಕ್ಕೆ ಸಂಬಂಧಿಸಿ ಸಂಘ ಪರಿವಾರದ ಭಯೋತ್ಪಾದಕರ ದಾಳಿ ಈಗೀಗ ಹೆಚ್ಚುತ್ತಲೇ ಇದೆ, ಅವರಿಗೆ ಕಾನೂನಿನ ಭಯವಿಲ್ಲ ಎಂದು ಪೋಸ್ಟ್ ನಲ್ಲಿ ಹೇಳಲಾಗಿದೆ. ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿ. 27 ರಂದು ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬಾತ ತನ್ನ ಮಗಳ ಜೊತೆಗೆ ಸ್ಕೂಟರ್‌ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವೇಳೆ, ಸುಮಿತ್ ಮತ್ತು ರಜತ್ ನಾಯಕ್ ಎಂಬವರು ತಡೆದು ನಿಲ್ಲಿಸಿ ಹಲ್ಲೆ ಮಾಡಿದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ. ಸದ್ರಿ ಘಟನೆಗೆ ಸಂಬಂಧಿಸಿದಂತೆ ಇನ್ ಸ್ಟಾ ಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮ್ ಲೀಡರ್ ಎಂಬ ಹೆಸರಲ್ಲಿ ಪ್ರಚೋದನಕಾರಿ ಸಂದೇಶ ಹಾಕಲಾಗಿದೆ. ಇಬ್ಬರು ಯುವಕರ ಪೋಟೋವನ್ನು ಹಾಕಲಾಗಿದೆ. ಇನ್ನು ಗೋಮಾಂಸ ತಿನ್ನುತ್ತೇವೆ, ಸಂಘಗಳೇ ಏನು ಮಾಡುತ್ತೀರಾ.. ಥೂ.. ನಿಮ್ಮ ಜನ್ಮಕ್ಕೆ. ಹದಿಹರೆಯದ ಮಕ್ಕಳನ್ನು ಕೂಡ ನೀವು ನೋಡುವುದಿಲ್ಲ. ನಿಮ್ಮ ಮನೆಯಲ್ಲಿ ಮಕ್ಕಳು ಇಲ್ಲವೇ.. ಸರ್ಕಾರ ಆದಷ್ಟು ಬೇಗ ಈ ನಾಯಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಎಂದೂ ಅದರಲ್ಲಿ ಹೇಳಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…