ಮಂಗಳೂರು: ಫುಟ್‌ಪ್ಯಾತ್ ಗಳಲ್ಲಿ ಅಡ್ಡಲಾಗಿ ಬಟ್ಟೆ ಬರೆಗಳು, ಇತರ ವಸ್ತು ವ್ಯಾಪಾರಗಳನ್ನು ಮಾಡುತ್ತಿರುವುದರಿಂದ ಜನರು ರಸ್ತೆಗೆ ಇಳಿದು ಹೋಗುವ ಪರಿಸ್ಥಿತಿ ಸೃಷ್ಟಿ ಮಾಡುತ್ತಿದೆ. ಇದರಿಂದ ವಾಹನ ಸವಾರರೂ ಜಾಗೃತವಾಗಿರಬೇಕು, ಇನ್ನೂ ಶಾಲಾ ಮಕ್ಕಳಿಗೂ ಇದರಿಂದ ತೊಂದರೆ ಆಗುತ್ತಿದೆ ಎಂದು ಹೇಳಲಾಗುತ್ತಿದೆ.
ಬೀದಿ-ಬದಿ ವ್ಯಾಪಾರಸ್ಥರು ಎಲ್ಲೆಂದರಲ್ಲಿ ಅನಧಿಕೃತವಾಗಿ ಅಂಗಡಿ, ಗೂಡಂಗಡಿ ಮೂಲಕ ಇತರೆ ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಓಡಾಡಲು ಹಾಗೂ ವಾಹನ ಸವಾರರಿಗೆ ರಸ್ತೆತಡೆ ಉಂಟಾಗಿ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಉದ್ದಿಮೆ ಪರವಾನಗಿ ಪಡೆಯದೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಕಾನೂನು ಬಾಹಿರವಾಗಿ ರಸ್ತೆ ಬದಿಯಲ್ಲಿ ಹಾಗೂ ಫುಟ್ ಪಾತ್‍ಗಳಲ್ಲಿ ಸಣ್ಣ ಪುಟ್ಟ ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವುದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಇದರ ಹಿನ್ನಲೆಯಲ್ಲಿ ಟೈಗರ್ ಕಾರ್ಯಾಚರಣೆ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಬೀದಿ-ಬದಿ ವ್ಯಾಪಾರಸ್ಥರ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…