ಜನ ಮನದ ನಾಡಿ ಮಿಡಿತ

Advertisement

ಪಾವೂರು ಗ್ರಾಮದ ಅಜಿರುಳಿಯದಿಂದ ಪಾದೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆದಿದೆ.

 

ಉಳ್ಳಾಲ : ಪಾವೂರು ಗ್ರಾಮದ ಅಜಿರುಳಿಯದಿಂದ ಪಾದೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆದಿದೆ.

 

ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ಮಜೀದ್ ಅಜಿರುಳಿಯದಿಂದ ಪಾದೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸಗೈದಿದ್ದಾರೆ. ಬಳಿಕ ಮಾತನಾಡಿದ ಅವರು ಇಲ್ಲಿ ಖಾಸಗಿ ಜಾಗವೇ ಇರುವುದರಿಂದ ರಸ್ತೆ ನಿರ್ಮಾಣ ಸವಾಲಾಗಿತ್ತು. ಆದರೆ ಸ್ಥಳೀಯ ಹೃದಯ ವೈಶಾಲ್ಯವುಳ್ಳವರು ಜಾಗವನ್ನು ಬಿಟ್ಟುಕೊಟ್ಟ ಕಾರಣ ಸ್ಪೀಕರ್ ಬಳಿ ಮಾತುಕತೆ ನಡೆಸಿದಾಗ ಅವರೇ ಸ್ಥಳ ಪರಿಶೀಲಿಸಿ ಮೊದಲ ಹಂತದ ಕಾಮಗಾರಿಗೆ ಅನುದಾನ ನೀಡಿದ್ದಾರೆ ಎಂದರು. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್ ಮಾತನಾಡಿ, ಸ್ವಾತಂತ್ರ‍್ಯ ಬಂದು 78 ವರ್ಷ ಕಳೆದರೂ ದೋಟಕ್ಕೆ ರಸ್ತೆ ಮಾಡಲು ಸಾಧ್ಯವಾಗಿರಲಿಲ್ಲ. ಶಾಸಕರು ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿ 40 ಕೋಟಿ ಅನುದಾನ ಮೀಸಲಿಟ್ಟಿದ್ದು ನಾಲ್ಕೈದು ತಿಂಗಳಲ್ಲಿ ಕೆಲಸ ಆರಂಭವಾಗಲಿದೆ. ಈಗ ಆಗುವ ರಸ್ತೆ ಗಾಡಿಗದ್ದೆ ಭಂಡಾರಮನೆ ಸಂಪರ್ಕ ಕಲ್ಪಿಸಲಿದೆ ಎಂದು ತಿಳಿಸಿದರು. ಇನ್ನು ಈ ಸಂಧರ್ಭದಲ್ಲಿ ಪಾವೂರು ಗ್ರಾಮ ಪಂಚಾಯಿತಿಯ ಸ್ಥಳೀಯ ಸದಸ್ಯರಾದ ರಿಯಾಝ್ ಅಹ್ಮದ್ ಪಾವೂರು, ರವಿಕಲಾ, ಮಾಜಿ ಸದಸ್ಯರಾದ ಚೆನ್ನಮ್ಮ, ಎಂ.ಪಿ.ಹಸನ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!