ಉಳ್ಳಾಲ : ಪಾವೂರು ಗ್ರಾಮದ ಅಜಿರುಳಿಯದಿಂದ ಪಾದೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆದಿದೆ.
ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ಮಜೀದ್ ಅಜಿರುಳಿಯದಿಂದ ಪಾದೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸಗೈದಿದ್ದಾರೆ. ಬಳಿಕ ಮಾತನಾಡಿದ ಅವರು ಇಲ್ಲಿ ಖಾಸಗಿ ಜಾಗವೇ ಇರುವುದರಿಂದ ರಸ್ತೆ ನಿರ್ಮಾಣ ಸವಾಲಾಗಿತ್ತು. ಆದರೆ ಸ್ಥಳೀಯ ಹೃದಯ ವೈಶಾಲ್ಯವುಳ್ಳವರು ಜಾಗವನ್ನು ಬಿಟ್ಟುಕೊಟ್ಟ ಕಾರಣ ಸ್ಪೀಕರ್ ಬಳಿ ಮಾತುಕತೆ ನಡೆಸಿದಾಗ ಅವರೇ ಸ್ಥಳ ಪರಿಶೀಲಿಸಿ ಮೊದಲ ಹಂತದ ಕಾಮಗಾರಿಗೆ ಅನುದಾನ ನೀಡಿದ್ದಾರೆ ಎಂದರು. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್ ಮಾತನಾಡಿ, ಸ್ವಾತಂತ್ರ‍್ಯ ಬಂದು 78 ವರ್ಷ ಕಳೆದರೂ ದೋಟಕ್ಕೆ ರಸ್ತೆ ಮಾಡಲು ಸಾಧ್ಯವಾಗಿರಲಿಲ್ಲ. ಶಾಸಕರು ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿ 40 ಕೋಟಿ ಅನುದಾನ ಮೀಸಲಿಟ್ಟಿದ್ದು ನಾಲ್ಕೈದು ತಿಂಗಳಲ್ಲಿ ಕೆಲಸ ಆರಂಭವಾಗಲಿದೆ. ಈಗ ಆಗುವ ರಸ್ತೆ ಗಾಡಿಗದ್ದೆ ಭಂಡಾರಮನೆ ಸಂಪರ್ಕ ಕಲ್ಪಿಸಲಿದೆ ಎಂದು ತಿಳಿಸಿದರು. ಇನ್ನು ಈ ಸಂಧರ್ಭದಲ್ಲಿ ಪಾವೂರು ಗ್ರಾಮ ಪಂಚಾಯಿತಿಯ ಸ್ಥಳೀಯ ಸದಸ್ಯರಾದ ರಿಯಾಝ್ ಅಹ್ಮದ್ ಪಾವೂರು, ರವಿಕಲಾ, ಮಾಜಿ ಸದಸ್ಯರಾದ ಚೆನ್ನಮ್ಮ, ಎಂ.ಪಿ.ಹಸನ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…