ಸುಬ್ರಹ್ಮಣ್ಯ : ಜನವರಿ 8 : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಶ್ರುತಿ ಅವರು ಕುಟುಂಬ ಸಮೇತರಾಗಿ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು.
ಶೃತಿ ಅವರೊಂದಿಗೆ ಅವರ ಅಪ್ಪ, ಅಮ್ಮ, ಚಿಕ್ಕಮ್ಮ ಹಾಗೂ ಕುಟುಂಬಸ್ಥರು ಜೊತೆಗಿದ್ದರು. ಶ್ರೀ ದೇವಳದಲ್ಲಿ ಪಂಚಾಮೃತ ಮಹಾಅಭಿಷೇಕ ಸೇವೆ ಸಲ್ಲಿಸಿದರು. ಸತ್ಯನಾರಾಯಣ ಅಸ್ರನ್ನ ಅವರು ತೀರ್ಥ ಹಾಗೂ ಶ್ರೀ ದೇವರ ಪ್ರಸಾದ ನೀಡಿದರು. ಅಲ್ಲಿಂದ ಹೊ ಸಳಿಗಮ್ಮ ದೈವದ ಗುಡಿಯಲ್ಲಿ ದರ್ಶನ ಮಾಡಿದರು. ತದನಂತರ ಶ್ರೀ ದೇವಳದ ಆಡಳಿತ ಕಚೇರಿಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ ಇಂಜಾಡಿ ಅವರು ಶಾಲು ಹೊಂದಿಸಿ ಶೃತಿ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಅಜಿತ್ ಪಾಲೇರಿ,ಸೌಮ್ಯ ಭರತ್, ಲೀಲಾ ಮನಮೋಹನ್,ಪ್ರವೀಣ ರೈ, ಮಾಸ್ಟರ್ ಪ್ಲಾನ್ ಸಮಿತಿಯ ಅಚ್ಚುತ ಗೌಡ ಬಳ್ಪ, ಕಾರ್ಯ ನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ, ಸಹಾಯಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮರಾವ್ ಶಿಷ್ಟಾಚಾರ ವಿಭಾಗದ ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು. ನಂತರ ಶ್ರೀ ದೇವಳದ ಅಲ್ಲಿ ಭೋಜನ ಪ್ರಸಾದ ಸ್ವೀಕರಿಸಿ ತೆರಳಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…