ಜನ ಮನದ ನಾಡಿ ಮಿಡಿತ

Advertisement

ಪೈನಾಪಲ್ ತೋಟ ಹಾಗೂ ಗಿಡ ಮರಗಳು ಬೆಂಕಿಗಾಹುತಿ…!

 

ಉಡುಪಿ : ಪೈನಾಪಲ್ ತೋಟ ಹಾಗೂ ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರದಲ್ಲಿ ಸಂಭವಿಸಿದೆ.

ಮಟಪಾಡಿ ಗ್ರಾಮದಿಂದ ನೀಲಾವರ ಕಡೆ ಹೋಗುವ ಮಾರ್ಗದ ಅಕ್ಕ ಪಕ್ಕದ ರಸ್ತೆಗಳಲ್ಲಿ ಬೆಂಕಿ ಅಬ್ಬರ ಜೋರಾಗಿತ್ತು. ಜೆನಿತ್ ಡೈ ಮೇಕರ್ ಇಂಡಸ್ಟ್ರಿ ಸಮೀಪದ ರಸ್ತೆಯ ಅಕ್ಕಪಕ್ಕಗಳಲ್ಲಿ ಬೆಂಕಿ ಕಾಣಿಸಿಕೊಂಡು, ನಂತರ ಹಬ್ಬಲಾರಂಭಿಸಿದೆ. ಪರಿಸರದಲ್ಲಿದ್ದ ಪೈನಾಪಲ್ ತೋಟ ಹಾಗೂ ಒಣಹುಲ್ಲು, ಗಿಡ ಗಂಟಿಗಳು ಸುಟ್ಟು ಕರಕಲಾಗಿವೆ. ಪರಿಸರದ ಅಡಿಕೆ ತೋಟ, ತೆಂಗು, ಹಲಸು ಗಿಡಗಳು ಕೂಡ ಸುಟ್ಟು ಹೋಗಿವೆ . ಪರಿಸರದಲ್ಲಿ ಸಣ್ಣಪುಟ್ಟ ಕೈಗಾರಿಕೆಗಳಿದ್ದು ಸಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳೀಯರು ಮತ್ತು ಅಗ್ನಿಶಾಮಕದಳದ ಕಾರ್ಯಾಚರಣೆಯಿಂದ ಅನಾಹುತ ತಪ್ಪಿದೆ. ಇತ್ತೀಚಿನ ದಿನಗಳಲ್ಲಿ ಬ್ರಹ್ಮಾವರ ಪರಿಸರದಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು ತಾಲೂಕು ಕೇಂದ್ರದಲ್ಲಿ ಶಾಶ್ವತ ಅಗ್ನಿಶಾಮಕ ಠಾಣೆ ಬೇಕೆಂಬ ಬೇಡಿಕೆ ಹೆಚ್ಚಿದೆ. ಯಾವುದೇ ಅವಘಡ ಸಂಭವಿಸಿದರೆ, ಉಡುಪಿ ಇಂದ ಅಗ್ನಿಶಾಮಕ ವಾಹನ ಹೋಗಬೇಕಾಗಿದೆ.ಇದು ಸಾರ್ವಜನಿಕ ರ ಆಕ್ರೋಶ ಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!