ಕಡಬ ತಾಲೂಕು, ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರದಿಂದ ರಹಧಾರಿ ರಹಿತವಾಗಿ ಮರದ ದಿಮ್ಮಿಗಳನ್ನು ಮಂಗಳೂರಿಗೆ ಸಾಗಾಟ ಮಾಡುತ್ತಿರುವ ಅರಣ್ಯ ತಕ್ಷೀರನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪತ್ತೆಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯ ಅಧಿಕಾರಿ ವಿನಯ್ ಕುಮಾರ್, ಪ್ರವೀಣ್ ಪಿ, ಗಸ್ತು ಅರಣ್ಯ ಪಾಲಕರಾದ ವಿನಯ ಚಂದ್ರ, ಶಿವಾನಂದ ಕುದುರಿ, ಜಗದೀಶ್ ಕೆಎನ್, ಹಾಗೂ ಚಾಲಕ ಕಿಶೋರ್ ಮತ್ತು ಸಿಬ್ಬಂದಿಗಳಾದ ದಿನೇಶ್ ಇವರು ಪಾಲ್ಗೊಂಡಿದ್ದಾರೆ. ವಾಹನ ಮತ್ತು ಸೊತ್ತಿನ ಮೌಲ್ಯವು ಸುಮಾರು ಏಳರಿಂದ ಎಂಟು ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಸದರಿ ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಂತೋನಿ ಎಸ್ ಮರಿಯಪ್ಪ ಇವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯಕ್ ಇವರ ನಿರ್ದೇಶನದಂತೆ ವಲಯ ಅಧಿಕಾರಿಗಳಾದ ರಾಘವೇಂದ್ರ ಹೆಚ್. ಪಿ ನಡೆಸಲಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…