ಶಬರಿಮಲೆ ಯಾತ್ರೆ ಕೈಗೊಂಡ ಬಾಲಕ ದೇವರ ದರ್ಶನ ಮುಗಿಸಿ ವಾಪಸು ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತದಾರಿ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ನಡೆದಿದೆ.
ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಮೀಶ ಪೂಜಾರಿ ಎಂಬಾತ ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ. ಇನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದುರ್ಗಾನಗರ ನಿವಾಸಿಗಳಾದ ಅಶೋಕ್ ಪೂಜಾರಿ, ಸಂತೋಷ್ ಪೂಜಾರಿ, ಸಚಿನ್, ಗೋಪಾಲಪೂಜಾರಿ, ಲಕ್ಮೀಶ ಪೂಜಾರಿ, ಕಿರಣ್, ವರದ್ ರಾಜ್ ಇನ್ನೋವಾ ಕಾರಿನಲ್ಲಿ ಒಟ್ಟು 7 ಮಂದಿ ಕುರಿಯಾಳದಿಂದ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ತೆರಳಿದ್ದಾರೆ.
ಸಿದ್ದಕಟ್ಟೆ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಲಕ್ಷ್ಮೀಶ ಆತನ ತಂದೆ ಅಶೋಕ್ ಪೂಜಾರಿ ಜೊತೆ ಶಬರಿಮಲೆಗೆ ಜ. 7ರಂದು ಇನ್ನೋವಾ ಕಾರಿನಲ್ಲಿ ತೆರಳಿದ್ರು, ಒಟ್ಟು ಒಂಬತ್ತು ಮಂದಿ ಕಾರಿನಲ್ಲಿ ತೆರಳಿದ್ದು, ದೇವರ ದರ್ಶನ ಮುಗಿಸಿ ವಾಪಸು ಜ. 9 ರಂದು ಮನೆಗೆ ಬರುತ್ತಿದ್ದ ವೇಳೆ ಕೊಟೆಕಲ್ ಎಂಬಲ್ಲಿ ಇವರ ಕಾರು ಕೆಟ್ಟುಹೋಗಿದೆ ಎಂಬ ಕಾರಣಕ್ಕಾಗಿ ಅಶೋಕ್ ಪೂಜಾರಿ ಒಬ್ಬರು ಕಾರಿನೊಳಗೆ ಕುಳಿತು ಕೊಂಡು ಉಳಿದಂತೆ ಚಾಲಕ ಸೇರಿ ಏಳು ಮಂದಿ ಕೂಡ ಕಾರಿನ ಎದುರು ಬೊನೆಟ್ ಓಪನ್ ಮಾಡಿ ಕಾರು ರಿಪೇರಿಯಲ್ಲಿ ತೊಡಗಿದ್ರು, ಸುಮಾರು 2 ಗಂಟೆ ವೇಳೆಗೆ ಯಮಸ್ವರೂಪಿ ಲಾರಿಯೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎಲ್ಲರೂ ರಸ್ತೆಗೆ ಎಸೆಯಲ್ಪಟ್ಟಿದ್ದು ಅದೇ ಯಮ ಸ್ಚರೂಪಿ ಲಾರಿಯ ಅಡಿಗೆ ಬಾಲಕ ಲಕ್ಮೀಶ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಉಳಿದಂತೆ ವರದರಾಜ್ ಎಂಬವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಕಾರಿನ ಎದುರಿದ್ದ ಎಲ್ಲರು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…