ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯಕ್ತಿಯ ಚರುಮುರಿ ಸ್ಟಾಲ್ ಬಳಿ ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿದ ಪ್ರಕರಣದಲ್ಲಿ ರಸ್ತೆಗೆ ದನ ಬಿಟ್ಟವರ ಮೇಲೂ ಸುಮೊಟೋ ಕೇಸು ದಾಖಲಾಗಿದೆ.
ಎಡಪದವು ಬಳಿಯ ಪೂಪಾಡಿಕಲ್ಲು ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಗಳ ಪೂಜಾ ಕಾರ್ಯಕ್ರಮಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬ ಚರುಮುರಿ ಸ್ಟಾಲ್ ಹಾಕಿದ್ದು ಈ ವೇಳೆ ಅಲ್ಲಿಗೆ ಬಂದ ದನದ ಮುಖಕ್ಕೆ ಚೂರಿಯಿಂದ ಇರಿದ ಘಟನೆ ನಡೆದಿತ್ತು. ಚರುಮುರಿ ಸ್ಟಾಲ್ ಇರಿಸಿದ್ದಾಗ ಅಲ್ಲಿಗೆ ದನವೊಂದು ಬಂದಿದ್ದು ಟೊಮೆಟೋ ತಿನ್ನಲು ಮುಂದಾಗಿತ್ತು. ಈ ವೇಳೆ, ವ್ಯಕ್ತಿ ಕೋಪಗೊಂಡು ಟೊಮೆಟೋ ಕೊಯ್ಯುವ ಹರಿತ ಚೂರಿಯಲ್ಲಿ ದನದ ಮುಖಕ್ಕೆ ಬೀಸಿದ್ದು ಮುಖದ ಭಾಗದಲ್ಲಿ ಎರಡು ಇಂಚು ಆಳದ ಗಾಯವಾಗಿ ರಕ್ತ ಹರಿದಿತ್ತು. ಚೂರಿ ಇರಿದ ವ್ಯಕ್ತಿಯನ್ನು ಚರಮುರಿ ಸ್ಟಾಲ್ ನ ಉಮರಬ್ಬ ಎಂದು ಗುರುತಿಸಲಾಗಿದೆ.
ಈತ ಜಾತ್ರೆಯ ವೇಳೆ ಹಲವೆಡೆ ಚರುಮುರಿ ಸ್ಟಾಲ್ ಹಾಕಿ ವ್ಯಾಪಾರ ನಡೆಸುತ್ತಿದ್ದು ದನಕ್ಕೆ ಕತ್ತಿಯಿಂದ ಇರಿದ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ದನವನ್ನು ಹಿಡಿದು ಸ್ಥಳೀಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಘಟನೆ ಬಗ್ಗೆ ಯಾರೂ ಪೊಲೀಸರಿಗೆ ದೂರು ನೀಡಿಲ್ಲ ಎನ್ನಲಾಗಿದೆ. ಬಜರಂಗದಳ ಜಿಲ್ಲಾ ಮುಖಂಡರು ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಪೊಲೀಸ್ ಕಮಿಷನರ್ ಘಟನೆ ಬಗ್ಗೆ ಪ್ರತಿಕ್ರಿಯಿಸಿ, ಆಕಸ್ಮಿಕವಾಗಿ ಘಟನೆ ಆಗಿದೆ. ದನವನ್ನು ಸಾರ್ವಜನಿಕ ಪ್ರದೇಶದಲ್ಲಿ ಬಿಟ್ಟಿರುವುದು ತಪ್ಪು. ಹಾಗಾಗಿ ಅದರ ಮಾಲೀಕರ ವಿರುದ್ಧ ಕೇಸು ದಾಖಲಿಸಲಾಗಿದೆ. ಮತ್ತು ದನದ ಮೇಲೆ ಕ್ರೌರ್ಯ ತೋರಿಸಿದ್ದಕ್ಕಾಗಿ ಚೂರಿ ಬೀಸಿದ ವ್ಯಕ್ತಿಯ ವಿರುದ್ಧ ಸುಮೊಟೋ ಕೇಸು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…