ಮಂಗಳೂರು : ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣಕ್ಕಾಗಿ ಪೀಡಿಸಿ, ಹಲ್ಲೆಗೆ ಯತ್ನ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದನಗಳನ್ನು ಕಡಿಯಲು ಕೊಡ್ತೀಯಲ್ವಾ ಎಂದು ಮೂವರು ಆರೋಪಿಗಳು ಹಪ್ತಾ ಕೇಳಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ನಡೆದ ಘಟನೆ ಇದಾಗಿದ್ದು, ಅಂಗಾರಗುಡ್ಡೆ ಕೆಂಚನಕೆರೆ ನಿವಾಸಿ ಶಂಸುದ್ದೀನ್ ಎಂಬವರ ಮನೆಗೆ ನುಗ್ಗಿ ಮೂವರು ಆರೋಪಿಗಳು ಧಮಕಿ ಹಾಕಿದ್ದಾರೆ. ಶ್ಯಾಮಸುಂದರ್ ಶೆಟ್ಟಿ ,ಅಕ್ಷಯ್ ಪೂಜಾರಿ ಮತ್ತು ಸುವೀನ್ ಕಾಂಚನ್ ಬಂಧಿಸಲ್ಪಟ್ಟಿದ್ದಾರೆ. ಮುಂಬಯಿಯಲ್ಲಿ ನೆಲೆಸಿರುವ ಉದ್ಯಮಿಯೊಬ್ಬರಿಗೆ ಸೇರಿದ ಗದ್ದೆ, ತೋಟ, ಜಾಗ ಮತ್ತು ಮನೆಯನ್ನು ಶಂಸುದ್ದೀನ್ ನೋಡಿಕೊಳ್ಳುತ್ತಿದ್ದಾರೆ. ಮುಲ್ಕಿಯ ಅರಸು ಕಂಬಳದಲ್ಲಿ ಶಂಸುದ್ದೀನ್ ತಂದಿದ್ದ ಕೋಣಗಳಿಗೆ ಬಹುಮಾನ ಸಿಕ್ಕಿತ್ತು. ಬಹುಮಾನವಾಗಿ ಸಿಕ್ಕಿ ಬಂಗಾರದ ಸರದ ಜೊತೆಗೆ ಹಣ ಕೊಡಬೇಕೆಂದು ಈ ಮೂವರು ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಪ್ರಕರಣದ ತನಿಖೆ ನಡೆಸಿ ಶ್ಯಾಮಸುಂದರ್ ಶೆಟ್ಟಿ ಮತ್ತು ಅಕ್ಷಯ್ ಪೂಜಾರಿ ಮತ್ತು ಸುವೀನ್ ಕಾಂಚನ್ ಎಂಬವರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…