ಜನ ಮನದ ನಾಡಿ ಮಿಡಿತ

Advertisement

ಬಾಂಗ್ಲಾದೇಶಿ ಎಂದು ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಹಲ್ಲೆ…!

 

ಮಂಗಳೂರು : ಬಾಂಗ್ಲಾದೇಶಿ ಎಂದು ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನಾಲ್ವರ ವಿರುದ್ದ ಕೇಸು ದಾಖಲು ಮಾಡಲಾಗಿದೆ.

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಎಂದು ಗುರುತಿಸಲಾಗಿದೆ, ಆರೋಪಿಗಳ ಬಂಧನವಾಗಿದೆ . ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಕಳೆದ 10-15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ ಪ್ರಜೆ” ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತಾ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಹಲ್ಲೆ ಮತ್ತು ಮಾನಸಿಕ ಹಿಂಸೆಗೆ ಒಳಗಾದ ದಿಲ್‌ಜಾನ್ ಅನ್ಸಾರಿ ದುಷ್ಕರ್ಮಿಗಳ ಭಯದಿಂದ ಪೊಲೀಸರಿಗೆ ದೂರು ನೀಡಲು ಹಿಂಜರಿದಿದ್ದಾರೆ. ಈ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಲಸೆ ಕಾರ್ಮಿಕನನ್ನು ರಕ್ಷಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!