ಮಂಗಳೂರು : ಬಾಂಗ್ಲಾದೇಶಿ ಎಂದು ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನಾಲ್ವರ ವಿರುದ್ದ ಕೇಸು ದಾಖಲು ಮಾಡಲಾಗಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಎಂದು ಗುರುತಿಸಲಾಗಿದೆ, ಆರೋಪಿಗಳ ಬಂಧನವಾಗಿದೆ . ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಕಳೆದ 10-15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ ಪ್ರಜೆ” ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತಾ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಹಲ್ಲೆ ಮತ್ತು ಮಾನಸಿಕ ಹಿಂಸೆಗೆ ಒಳಗಾದ ದಿಲ್‌ಜಾನ್ ಅನ್ಸಾರಿ ದುಷ್ಕರ್ಮಿಗಳ ಭಯದಿಂದ ಪೊಲೀಸರಿಗೆ ದೂರು ನೀಡಲು ಹಿಂಜರಿದಿದ್ದಾರೆ. ಈ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಲಸೆ ಕಾರ್ಮಿಕನನ್ನು ರಕ್ಷಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…