ಖಾಸಗಿ ಸಂಸ್ಥೆಗೆ ಸೇರಿದ ಟೆಂಪೋ ವಾಹನವೊಂದು ಅನಿಲ ಸಾಗಾಟದ ಟ್ಯಾಂಕರ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.
ಕಲ್ಲಡ್ಕ ಫ್ಲೈ ಓವರ್‌ನಲ್ಲಿ ಅತಿವೇಗದಿಂದ ಬಂದ ಟೆಂಪೋ ವಾಹನ ಸಮುದ್ರ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಚಾಲಕನ ಕೈ ವಾಹನಗಳ ನಡುವೆ ಸಿಲುಕಿಕೊಂಡಿದೆ. ಗ್ಯಾಸ್ ಟ್ಯಾಂಕರ್‌ಗೆ ವಾಹನ ಡಿಕ್ಕಿಯಾಗಿದ್ದರಿಂದ, ಅನಿಲ ಸೋರಿಕೆಯ ಭಯದಿಂದ ಯಾರೂ ವಾಹನಗಳ ಮೇಲೆ ಒತ್ತಡ ಹಾಕಿಲ್ಲ.
ಸುದ್ದಿ ತಿಳಿದ ಪೊಲೀಸ್ 112 ವಾಹನದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಸ್ಥಳೀಯರ ನೆರವಿನೊಂದಿಗೆ ಚಾಲಕನನ್ನು ಹೊರತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪರಿಹಾರ ಕಾರ್ಯಾಚರಣೆಗೆ ನೆರವಾಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…