ಅಮೃತ ಭಾರತ ಯೋಜನೆಯಡಿ ನವೀಕರಣಗೊಳ್ಳುತ್ತಿರುವ ಬಂಟ್ವಾಳ ರೈಲ್ವೆ ನಿಲ್ದಾಣದ ಕಾಮಗಾರಿಯ ಗುಣಮಟ್ಟದ ಕುರಿತು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದರು.
ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಇದರಲ್ಲಿ ಬಂಟ್ವಾಳ ರೈಲ್ವೆ ನಿಲ್ದಾಣದ ಕಂಪೌಂಡ್‌ನ ಕಲ್ಲುಗಳು ಕುಸಿದಿರುವುದು ಕಂಡುಬಂದಿದೆ. ಇದನ್ನು ಯಾರಾದರೂ ಉದ್ದೇಶ ಪೂರ್ವಕವಾಗಿ ಕೆಡವಿದರೋ ಅಥವಾ ಕಳಪೆ ಕಾಮಗಾರಿಯಿಂದಾಗಿ ಹೀಗಾಯಿತೋ ಎಂಬ ಅನುಮಾನ ಮೂಡುವಂತೆ ಈ ವಿಡಿಯೋದಲ್ಲಿರುವ ದೃಶ್ಯಗಳು ಕಂಡುಬರುತ್ತಿವೆ.
ಕೋಟಿಗಟ್ಟಲೆ ಖರ್ಚು ಮಾಡಿ ಮರು ನಿರ್ಮಾಣವಾಗುತ್ತಿರುವ ಬಂಟ್ವಾಳ ರೈಲ್ವೆ ನಿಲ್ದಾಣದ ಕೆಲಸ ಕಾರ್ಯಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಮಾಡಿದ್ದು, ಅಂದಿನ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಹಾಜರಿದ್ದಾರೆ. ಇದೀಗ ಈ ಭಾಗದ ರೈಲ್ವೆ ಸುರಕ್ಷಾ ಸಮಿತಿ, ಸಲಹಾ ಸಮಿತಿಯ ಸದಸ್ಯರು ಹಾಗೂ ಸಂಬಂಧಪಟ್ಟ ಶಾಸಕರು, ಸಂಸದರು ಕಾಮಗಾರಿ ವೀಕ್ಷಿಸಿ ಇದರ ಗುಣಮಟ್ಟವನ್ನು ಸಂಬಂಧಪಟ್ಟವರಿಂದ ಪರಿಶೀಲಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಒಂದು ವೇಳೆ ಕಿಡಿಗೇಡಿಗಳೇನಾದರೂ ಇಂಥ ಕೃತ್ಯವೆಸಗಿದರೆ, ಅವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…