ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಾದ್ಯಂತ ಭಾರಿ ಅಕಾಲಿಕ ಮಳೆ ಸುರಿದಿದೆ.
ಕುಮಾರ ಪರ್ವತದ ತಪ್ಪಲಿನ ಪ್ರದೇಶಗಳು ಸೇರಿದಂತೆ ಕಡಬ, ನೆಟ್ಟಣ, ಕುಕ್ಕೆ ಸುಬ್ರಹ್ಮಣ್ಯ ಮತ್ತು ಪಂಜ ವ್ಯಾಪ್ತಿಯಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. 2026ರ ಹೊಸ ವರ್ಷದ ಆರಂಭದಲ್ಲೇ ಸುರಿದ ಈ ಅಕಾಲಿಕ ಮಳೆಯು ಈ ಭಾಗದ ಜನರನ್ನು ಸಂಕಷ್ಟಕ್ಕೆ ಈಡುಮಾಡಿದೆ. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಯಿಂದಾಗಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದವು.
ಸಂಜೆ ವೇಳೆ ದಿಢೀರನೆ ಅಬ್ಬರಿಸಿದ ಮಳೆರಾಯನಿಂದಾಗಿ ಕಚೇರಿಯಿಂದ ಮನೆಗೆ ಮರಳುವವರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…