ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

9 ಗಂಟೆ ನಿರಂತರ ಶಸ್ತ್ರಚಿಕಿತ್ಸೆ! ಸಯಾಮಿ ಸಹೋದರಿಯರನ್ನು ಯಶಸ್ವಿಯಾಗಿ ಬೇರ್ಪಡಿಸಿದ ದೆಹಲಿ ಏಮ್ಸ್ ವೈದ್ಯರು

ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ನ ತಜ್ಞ ವೈದ್ಯರು 9 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಒಂದು ವರ್ಷದ ಸಯಾಮಿ ಶಿಶುಗಳನ್ನು ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ.
ಉತ್ತರ ಪ್ರದೇಶದ ಬರೇಲಿ ಮೂಲದ ದೀಪಿಕಾ ಮತ್ತು ಅಂಕುರ್ ಗುಪ್ತಾ ಅವರಿಗೆ ರಿದ್ಧಿ ಮತ್ತು ಸಿದ್ಧಿ ಎಂಬ ಅವಳಿ ಹೆಣ್ಣು ಮಕ್ಕಳಿದ್ದರು. ಈ ಮಕ್ಕಳ ಎದೆ ಮತ್ತು ಹೊಟ್ಟೆ ಭಾಗಗಳು ಸೇರಿಕೊಂಡಿದ್ದವು.
ರಿದ್ಧಿ ಮತ್ತು ಸಿದ್ಧಿ ಸುಮಾರು 1 ವರ್ಷದ ಅವಳಿ ಸಹೋದರಿಯರು. ಹುಟ್ಟಿನಿಂದಲೇ ಪರಸ್ಪರ ಅಂಟಿಕೊಂಡಿದ್ದರು. ದೇಹದ ಅನೇಕ ಭಾಗಗಳು ಒಂದಕ್ಕೊಂದು ಸಂಪರ್ಕ ಹೊಂದಿದ್ದವು.


ಬರೇಲಿಯಲ್ಲಿ ದೀಪಿಕಾ ಗುಪ್ತಾ ಅವರ ಗರ್ಭಧಾರಣೆಯ ನಾಲ್ಕನೇ ತಿಂಗಳಲ್ಲಿ ಥೋರಾಕೊ-ಆಂಫಾಲೋಪಾಗಸ್ ಸಂಯೋಜಿತ ಅವಳಿಗಳೆಂದು ಜನನದ ಮೊದಲೇ ಗುರುತಿಸಲಾಗಿತ್ತು. ಕಳೆದ ವರ್ಷ ಜುಲೈ 7ರಂದು ಜನಿಸಿದ ಮಕ್ಕಳು ಐದು ತಿಂಗಳ ಕಾಲ ಐಸಿಯುನಲ್ಲಿದ್ದರು. ಸುದೀರ್ಘ ಶಸ್ತ್ರಚಿಕಿತ್ಸೆಯ ನಂತರ ಜೂನ್ 8ರಂದು ಮಕ್ಕಳನ್ನು ಬೇರ್ಪಡಿಸಲಾಯಿತು. ಅವಳಿಗಳು ತಮ್ಮ ಮೊದಲ ಹುಟ್ಟುಹಬ್ಬವನ್ನು ಆಸ್ಪತ್ರೆಯಲ್ಲೇ ಆಚರಿಸಿಕೊಂಡರು” ಎಂದು ಪೀಡಿಯಾಟ್ರಿಕ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಮಿನು ಬಾಜ್ಪೈ ಹೇಳಿದ್ದಾರೆ.

ಏಮ್ಸ್ ಆಸ್ಪತ್ರೆಯು ಕಳೆದ ಕೆಲವು ವರ್ಷಗಳಲ್ಲಿ ಇಂತಹ ಹಲವು ಆಪರೇಷನ್‌ಗಳನ್ನು ಮಾಡಿದೆ. ಇಬ್ಬರು ಸಹೋದರಿಯರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಭವಿಷ್ಯದಲ್ಲಿ ಈ ಶಸ್ತ್ರಚಿಕಿತ್ಸೆಯಿಂದ ಅವರು ಯಾವುದೇ ಸಮಸ್ಯೆ ಎದುರಿಸುವುದಿಲ್ಲ. ಹೀಗೆ ಅವಳಿ ಮಕ್ಕಳು ಜನಿಸುವುದು ಸಾವಿರದಲ್ಲಿ ಒಬ್ಬರಿಗೆ ಮಾತ್ರ. ಚಿಕಿತ್ಸೆಯ ನಂತರ ಪೋಷಕರು ತುಂಬಾ ಸಂತೋಷವಾಗಿದ್ದಾರೆ” ಎಂದು ವೈದ್ಯರು ತಿಳಿಸಿದ್ದಾರೆ.

ದೇಶದ ಅತಿದೊಡ್ಡ ಆಸ್ಪತ್ರೆಯಾದ ಏಮ್ಸ್ ವೈದ್ಯರು ಆಧುನಿಕ ವೈದ್ಯಕೀಯ ವಿಜ್ಞಾನದಲ್ಲಿ ಏಮ್ಸ್‌ ಹೆಸರೇಕೆ ಉತ್ತುಂಗದಲ್ಲಿದೆ ಎಂದು ಈ ಅಪರೂಪದ ಶಸ್ತ್ರಚಿಕಿತ್ಸೆಯ ಮೂಲಕ ಸಾಬೀತುಪಡಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!