ಆಂದ್ರಪ್ರದೇಶದಲ್ಲಿ ಜನವರಿ 15 ರಂದು ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದು, ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ ಆಗಿದ್ದು, ತನ್ನ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಮಂಗಳೂರಿನ ಶಕ್ತಿ ಕಾಲೇಜ್‌ನಲ್ಲಿ, ಹೈಸ್ಕೂಲ್ ವಿದ್ಯಾಭ್ಯಾಸವನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿಯೂ ಮತ್ತು ಪ್ರಾಥಮಿಕ ವಿದ್ಯಾಭ್ಯಾಸವನ್ನು ಕೋಡಿಂಬಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರೈಸಿದ ವಿದ್ಯಾರ್ಥಿಯಾಗಿದ್ದಾರೆ.
ಕೋಡಿಂಬಾಡಿ ಬರೆಮೇಲು ದಿನೇಶ್ ಶೆಟ್ಟಿ ಮತ್ತು ಕೆದಂಬಾಡಿಗುತ್ತು ಶ್ರೀಮತಿ ಆಶಾ ದಿನೇಶ್ ಶೆಟ್ಟಿ ದಂಪತಿಯ ಸುಪುತ್ರನಾಗಿರುವ ಇವರು ಪ್ರಸ್ತುತ ಕುಂಬ್ರ ಬಡೆಕ್ಕೋಡಿ ನಿವಾಸಿಯಾಗಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…