ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಕೂಳೂರಿನ ಮೋಹನ್ ಎಂದು ಗುರುತಿಸಲಾಗಿದೆ. ಈ ಮುಂಚೆ ಕೂಳೂರಿನ ರತೀಶ್ ದಾಸ್, ಧನುಷ್, ಸಾಗರ್ ಎಂಬವರನ್ನು ಬಂಧಿಸಲಾಗಿತ್ತು. ಮೋಹನ್‌ನ ಬಂಧನದೊಂದಿಗೆ ಪ್ರಕರಣದ ನಾಲ್ಕು ಮಂದಿ ಆರೋಪಿಗಳನ್ನೂ ಪೊಲೀಸರು ಬಂಧಿಸಿದಂತಾಗಿದೆ. ಕಳೆದ 15 ವರ್ಷಗಳಿಂದ ಮಂಗಳೂರು ಸೇರಿದಂತೆ ಮತ್ತಿತರ ಕಡೆ ಮೇಸ್ತ್ರಿ ಕೆಲಸ ಮಾಡುತ್ತಿದ್ದ ದಿಲ್‌ಜಾನ್ ಅನ್ಸಾರಿ ಜ.11ರಂದು ಸಂಜೆ ಕೆಲಸ ಮುಗಿಸಿ ಕೂಳೂರಿನಲ್ಲಿ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದಾಗ ಆರೋಪಿಗಳು ಬಾಂಗ್ಲಾದೇಶಿ ಪ್ರಜೆ ಎಂದು ನಿಂದಿಸಿ ದೌರ್ಜನ್ಯ ಎಸಗಿದ್ದ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…