ಶ್ರೀ ಶಾರದಾ ಭಜನಾ ಮಂದಿರ ನಗ್ರಿ ಇಲ್ಲಿಂದ ಶ್ರೀ ಮಿತ್ತಮಜಲು ಕ್ಷೇತ್ರದ ರಸ್ತೆಗೆ ಸಂಪರ್ಕ ಕಲ್ಪಿಸುವ ಸುಮಾರು 1.3 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಹೊಸ ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸ್ಥಳೀಯರೊಂದಿಗೆ ವೀಕ್ಷಣೆ ನಡೆಸಿದ ಬಳಿಕ ಸಾರ್ವಜನಿಕರಿಗೆ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ರಸ್ತೆ ಸಂಪರ್ಕವೂ ಒಂದಾಗಿದ್ದು, ಗ್ರಾಮದ ಮೂಲೆಮೂಲೆಗಳಿಗೆ ಸುಸಜ್ಜಿತವಾದ ರಸ್ತೆಯ ನಿರ್ಮಾಣ ಮಾಡಿ ಸಂಪರ್ಕ ಕಲ್ಪಿಸಿದರೆ ಗ್ರಾಮದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. ಪುದ್ದಾರ್ ಮೆಚ್ಚಿ ಜಾತ್ರೆಯು ದಿನಾಂಕ 14, ಬುಧವಾರ ರಾತ್ರಿ ಉಳ್ಳಾಲ್ತಿ ಮೆಚ್ಚಿಯೊಂದಿಗೆ ಪ್ರಾರಂಭವಾಗಿ ದಿನಾಂಕ 15, ಗುರುವಾರ ಬೆಳಗ್ಗೆ 10.30 ಕ್ಕೆ ದೈಯ್ಯಂಗುಲು ನೇಮೋತ್ಸವ ಹಾಗೂ ರಾತ್ರಿ ನಾಲ್ಕೆತ್ತಾಯ ದೈವದ ಮೆಚ್ಚಿಮೂಲಕ ನಡೆಯಲಿದೆ. ಹಾಗಾಗಿ ಭಕ್ತರಿಗೆ ಬರಲು ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆಯನ್ನು ಸಾರ್ವಜನಿಕರ ಸಂಚಾರಕ್ಕೆ ಬಿಟ್ಟು ಕೊಡಲಾಗಿದೆ ಎಂದು ನಗ್ರಿಗುತ್ತು ವಿವೇಕ್ ಶೆಟ್ಟಿ ತಿಳಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಶ್ರೀಕಾಂತ್ ಶೆಟ್ಟಿ ಸಜೀಪ, ಸಜೀಪ ಮೂಡ ಗ್ರಾ.ಪಂ.ಮಾಜಿ ಅಧ್ಯಕ್ಷ ಶೋಬಿತ್ ಪೂಂಜ, ಜಿ.ಪಂ.ಮಾಜಿ ಸದಸ್ಯ ರವೀಂದ್ರ ಕಂಬಳಿ, ಸೇರಿದಂತೆ ಮತ್ತಿತತರು ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…