ಜ.13 ರಂದು ಸಂಪಿಗೆಹಳ್ಳಿಯ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿ ಟಿವಿ ಆಧರಿಸಿ ಕಳ್ಳರನ್ನು ಸೆರೆ ಹಿಡಿದಿದ್ದರು.
ಈ ವೇಳೆ ಪೊಲೀಸರೇ ಶಾ*ಕ್ ಆದ ಘಟನೆ ನಡೆದಿದೆ ಅಸಲಿಗೆ ನಡೆದದ್ದು ಇಷ್ಟೇ. ಕಳವು ಪ್ರಕರಣ ತನಿಖೆ ಆರಂಭಿಸಿದ ಪೊಲೀಸರು ಸಿಸಿ ಟಿವಿ ದೃಶ್ಯ ಆಧರಿಸಿ ತನಿಖೆ ಆರಂಭಿಸಿದಾಗ ಇಬ್ಬರು ಯುವಕರು ನಡೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡುಬಂದಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು ಆ ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆಯೇ ಗೊತ್ತಾಗಿದ್ದು, ಅವರು ಹುಡುಗರಲ್ಲ, ಹುಡುಗಿಯರು ಎಂಬುದು. ಶಾಲು ಮತ್ತು ನೀಲು ಬಂಧಿತ ಕಳ್ಳಿಯರು. ಇವರು ಹುಡುಗರಂತೆ ಪ್ಯಾಂಟ್ ಶರ್ಟ್, ಟೋಪಿ ಹಾಕಿಕೊಂಡು ಬೈಕಿನಲ್ಲಿ ಓಡಾಡುತ್ತಿದ್ದು, ನಿರ್ಜನ ಪ್ರದೇಶದ ಮನೆಗಳಲ್ಲೇ ಹಾಡಹಗಲೇ ಕಳ್ಳತನ ಮಾಡುತ್ತಿದ್ದರು. ಸದ್ಯ ಇಬ್ಬರನ್ನು ಬಂಧಿಸಿ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…