ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮದ ಬಂಗ್ಲೆ ಎಂಬಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸುರಂಗದೊಳಗೆ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಅತ್ಯಂತ ಸಾಹಸಮಯವಾಗಿ ರಕ್ಷಿಸಿದ್ದಾರೆ.
ಪುತ್ತಿಗೆಯ ಜಾಣಪ್ಪ ಗೌಡರ ಪುತ್ರ ರಾಧಾಕೃಷ್ಣ ಎಂಬವರು ಅಕಸ್ಮಿಕವಾಗಿ ಸುಮಾರು 30 ಅಡಿ ಆಳದ ಬಾವಿಗೆ ಬಿದ್ದಿದ್ರು, ಬಿದ್ದ ರಭಸಕ್ಕೆ ಅವರು ಬಾವಿಯ ಒಳಗಿದ್ದ ಸುಮಾರು 20 ಅಡಿ ಆಳದ ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ. ಇದು ರಕ್ಷಣಾ ಕಾರ್ಯಕ್ಕೆ ದೊಡ್ಡ ಸವಾಲಾಗಿದೆ. ರಕ್ಷಣೆ ಕಾರ್ಯಾಚರಣೆಗೆ ಕಾರ್ಕಳ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಚಂದ್ರಶೇಖರ್ ಅವರ ನೇತೃತ್ವದ ತಂಡ ಬಂದಿದ್ದು, ಸತತ 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದೆ.
ಸಿಬ್ಬಂದಿಗಳಾದ ಜಯ ಮೂಲ್ಯ ಹಾಗೂ ರೂಪೇಶ್ ಅವರು ಬಾವಿಯೊಳಗೆ ಇಳಿದಿದ್ದರು. ಇವರಿಗೆ ಸಹೋದ್ಯೋಗಿಗಳಾದ ನಿತ್ಯಾನಂದ ಮತ್ತು ಬಸವರಾಜ ಅವರು ಸಾಥ್ ನೀಡಿದ್ದಾರೆ. ಬಾವಿಯ ಕತ್ತಲೆ ಮತ್ತು ಸುರಂಗದ ಸಂಕೀರ್ಣತೆಯ ನಡುವೆಯೂ ಅಗ್ನಿಶಾಮಕ ದಳದವರು ಯಶಸ್ವಿಯಾಗಿ ರಾಧಾಕೃಷ್ಣ ಅವರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಮೂಡುಬಿದಿರೆ ಅಗ್ನಿಶಾಮಕ ದಳದಲ್ಲಿ ಸಿಬ್ಬಂದಿ ಕೊರತೆ ಕಾರಣ ಕಾರ್ಕಳದವರನ್ನು ಕರೆಸಲಾಗಿದೆ. ಪುತ್ತಿಗೆ ಗ್ರಾಪಂ.ಸದಸ್ಯ ಪುತ್ತಿಗೆ ಪದವು ಜೋಗೇರಿ ದಿನೇಶ್ ಕುಮಾರ್ ಮತ್ತು ಪುತ್ತಿಗೆ ಪಂಚಾಯತ್ ಮಾಜಿ ಅಧ್ಯಕ್ಷರು ಪ್ರವೀಣ್ ಶೆಟ್ಟಿ ರಕ್ಷಣೆ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…