ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು ಪತ್ತೆಯಾಗಿದೆ. ರಣಹದ್ದಿನಲ್ಲಿ ಟ್ರ‍್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ವಸ್ತು, ಜೊತೆಗೆ ಅದರ ಕಾಲಿನಲ್ಲಿ ಗುರುತಿನ ಸಂಖ್ಯೆಯ ಟ್ಯಾಗ್ ಇರುವುದು ಕಂಡುಬಂದಿದೆ.
ಅಸಹಜ ಸ್ಥಿತಿಯಲ್ಲಿದ್ದ ರಣಹದ್ದು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ರಣಹದ್ದನ್ನು ವಶಕ್ಕೆ ಪಡೆದು, ಝಳಕಿ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ. ನಂತರ ಠಾಣೆಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಮಹಾರಾಷ್ಟ್ರದ ನಾಗಪೂರ ಬಳಿಯ ಮೇಲಘಾಣ ಪ್ರದೇಶದಿಂದ ರಣಹದ್ದು ಬಂದಿದೆ ಎನ್ನಲಾಗಿದೆ. ಜಿಪಿಎಸ್, ಟ್ರ‍್ಯಾಕರ್ ಭಾರವಾದ ಕಾರಣ ಪಕ್ಷಿ ಕೆಳಗೆ ಬಿದ್ದಿದೆ. ಮಹಾರಾಷ್ಟ್ರದ ಅರಣ್ಯ ಇಲಾಖೆಯಿಂದ ರಣಹದ್ದಿಗೆ ಜಿಪಿಎಸ್ ಹಾಗೂ ಟ್ರ‍್ಯಾಕರ್ ಅಳವಡಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು ರಣಹದ್ದು ಸಂಖ್ಯೆ ಕಡಿಮೆಯಾಗಿರೋ ಕಾರಣ ಅಧ್ಯಯನಕ್ಕಾಗಿ ಅರಣ್ಯಾಧಿಕಾರಿಗಳು ಈ ಯೋಜನೆ ಮಾಡಿದ್ದಾರೆ ಎನ್ನಲಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…