ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರರಾಗಿ ಬಂಟ್ವಾಳ ತಾಲೂಕು ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಮಾಧವ ಮಾವೆ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಕ ಮಾಡಿದ್ದಾರೆ.
ಮಾಧವ ಮಾವೆಯವರು ಬಂಟ್ವಾಳ ತಾಲೂಕು ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾಗಿ, ತಾಲೂಕು ಪಂಚಾಯತ್ ಸದಸ್ಯರಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಜಿಲ್ಲೆಯ ಕಾರ್ಯಕಾರಿಣಿ ಸಮಿತಿಯ ವಿವಿಧ ಜವಾಬ್ದಾರಿಯ ಸಂಚಾಲಕರಾಗಿ, ಬೇರೆ ಬೇರೆ ಗ್ರಾಮಗಳ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ರಾಜಕೀಯ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿಭಾಯಿಸಿ ಪಕ್ಷ ಸಂಘಟನೆಯಲ್ಲಿ ಮುಂಚೂಣಿ ನಾಯಕರಾಗಿರುವ ಇವರು ರಾಜಕೀಯ ಮಾತ್ರವಲ್ಲದೆ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…