ಮುನ್ನೂರು ಗ್ರಾಮದ, ರಾಣಿಪುರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳದ ನಂದಾವರ ಸಜಿಪ ಮುನ್ನೂರು ನಿವಾಸಿ 40 ವರ್ಷದ ಇಮ್ಮಿಯಾಜ್ ಯಾನೆ ಮೊಹಮ್ಮದ್ ಇಮ್ಮಿಯಾಜ್ ಬಂಧಿತ ಆರೋಪಿ. ಈತ ರಾಣಿಪುರ ಮೈದಾನದ ಬಳಿ ಗಿರಾಕಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಎಮ್.ಡಿ.ಎಮ್.ಎ ಮಾರಾಟ ಮಾಡತ್ತಿದ್ದ ಖಚಿತ ಮಾಹಿತಿ ಹಿನ್ನೆಲೆ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಆತನಿಂದ 65,000 ರೂಪಾಯಿ ಮೌಲ್ಯದ 13 ಗ್ರಾಂ ತೂಕದ ಎಮ್.ಡಿ.ಎಮ್.ಎ, 2 ಸಾವಿರ ರೂಪಾಯಿ ನಗದು, ಒಂದು ಮೊಬೈಲ್ ಫೋನ್, ತೂಕ ಮಾಪನ ಮತ್ತು ಇತರ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…