ಕುಂಬಡಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪುಷ್ಪಲತಾ ವಿ ಶೆಟ್ಟಿ ಕೊ*ಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಬದಿಯಡ್ಕ ಪಂಚಾಯತ್ ನ ಪೆರ್ಡಾಲ ಮೂಲದ 47 ವರ್ಷದ ಪರಮೇಶ್ವರ ಅಲಿಯಾಸ್ ರಮೇಶ್ ನಾಯಕ್ ಬಂಧಿತ ಆರೋಪಿ. ಮೊವ್ವಾರ್ ಗ್ರಾಮದ ಅಜಿಲದಲ್ಲಿರುವ ತಮ್ಮ ಮನೆಯಲ್ಲಿ ಪುಷ್ಪಲತಾ ಶೆಟ್ಟಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಜ.14 ರಂದು ಬೆಳಿಗ್ಗೆ ಪುಷ್ಪಲತಾ ಶ*ವವಾಗಿ ಪತ್ತೆಯಾಗಿದ್ದು, ಮ*ರಣೋತ್ತರ ಪರೀಕ್ಷೆಯಲ್ಲಿ, ಕೈಯಿಂದ ಉಸಿರುಗಟ್ಟಿಸಿ ಆಕೆಯನ್ನು ಕೊ*ಲ್ಲಲಾಗಿದೆ ಎಂಬುದು ತಿಳಿದುಬಂದಿತ್ತು. ತನಿಖೆ ಆರಂಭಿಸಿದ ಪೊಲೀಸರು, ಆ ಪರಿಸರದಲ್ಲಿ ಹಾದುಹೋದ ಜನರನ್ನು ವಿಚಾರಣೆ ನಡೆಸಿದ್ದಾರೆ. ಆರೋಪಿ ರಮೇಶ್ ನಾಯಕ್ ಆ ಪ್ರದೇಶದಲ್ಲಿ ಹುಲ್ಲು ಕಟ್ಟಿಂಗ್ ಮಾಡುತ್ತಿದ್ದದ್ದನ್ನು ಹಲವರು ನೋಡಿದ್ದರು. ಈ ಆಧಾರದಲ್ಲಿ ರಮೇಶ್ ನಾಯಕ್ ನನ್ನು ವಿಚಾರಣೆಗೊಳಪಡಿಸಲಾಗಿದೆ. ಇನ್ನು ಆತನ ಮೈಮೇಲೆ ಹಲವು ಕಡೆಗಳಲ್ಲಿ ಗಾ*ಯಗಳಿರುವ ಬಗ್ಗೆ ಕೇಳಿದಾಗ ಅದು ಕಾಳುಮೆಣಸು ಕೀಳುವ ವೇಳೆ ಆಗಿದ್ದು ಎಂದು ಸುಳ್ಳು ಹೇಳಿದ್ದ. ವಿಚಾರಣೆ ತೀವ್ರಗೊಳಿಸಿದಾಗ ಕೊ*ಲೆ ಮಾಡಿರುವ ವಿಚಾರ ರಮೇಶ್ ಬಾಯ್ಬಿಟ್ಟಿದ್ದಾನೆ. ರಮೇಶ್ ನಾಯಕ್ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದು, ಮನೆ ಕಟ್ಟಲು ಭೂಮಿ ಖರೀದಿಸಲು ಸುಮಾರು 8 ಲಕ್ಷ ಸಾಲ ಮಾಡಿದ್ದ. ಈ ಹಿನ್ನಲೆ ಹಣಕ್ಕಾಗಿ ಪುಷ್ಪಲತಾ ಧರಿಸಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಆಕೆ ವಿರೋಧಿಸಿದಾಗ, ಆಕೆಯ ಕತ್ತು ಹಿಸುಕಿ ಕೊಂ*ದಿದ್ದಾನೆ. ಬಳಿಕ ಸುಮಾರು 28 ಗ್ರಾಂನ ಕರಿಮಣಿ ಸರ ಕದ್ದಿದ್ದ ಎಂಬ ವಿಚಾರ ತನಿಖೆ ವೇಳೆ ಬಯಲಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…