ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ: ಅನೈತಿಕ ಸಂಬಂಧ ಹಿನ್ನಲೆ ಪ್ರಿಯಕರನಿಂದಲೇ ಹತ್ಯೆಯಾದ ಯಮನವ್ವ!

ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ಜ.14 ರಂದು ರಾತ್ರಿ ನಡೆದಿದೆ.

ಯಮನವ್ವ(40) ಕೊಲೆಯಾದ ಮಹಿಳೆ. ಶ್ರೀಶೈಲ ಪಾಟೀಲ್(67) ಕೊಲೆಗೈದ ಆರೋಪಿ. ಸುಮಾರು 20 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನೆ ಪಡೆದಿದ್ದ ಯಮನವ್ವ, ಶ್ರೀಶೈಲ ಪಾಟೀಲ್ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಅಷ್ಟೇ ಅಲ್ಲದೇ ಇತ್ತೀಚೆಗೆ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ವಿಷಯ ತಿಳಿದ ನಂತರ ಇಬ್ಬರ ಮಧ್ಯೆ ತೀವ್ರವಾದ ಜಗಳ ಉಂಟಾಗಿತ್ತು. ಬಳಿಕ ಶ್ರೀಶೈಲ ಯಮನವ್ವಳ ಕಿವಿಗೆ ಬಲವಾಗಿ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆಕೆ ಉಸಿರು ನಿಂತ ಮೇಲೆ ಆಘಾತಗೊಂಡು ಮರುದಿನ ಬೆಳಿಗ್ಗೆ ಯಮನವ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಅಕ್ಕಪಕ್ಕದವರಿಗೆ ಆತನೇ ತಿಳಿಸಿದ್ದಾನೆ. ಬಳಿಕ ಮೃತದೇಹದ ಮುಂದೆ ಮೊಸಳೆ ಕಣ್ಣಿರು ಹಾಕಿದ್ದಾನೆ. ಇನ್ನು ಪೊಲೀಸರಿಗೂ ಆತನೇ ಮಾಹಿತಿ ನೀಡಿದ್ದಾನೆ. ವಿಚಾರಣೆಯ ವೇಳೆ ಆರೋಪಿಯ ಬಣ್ಣ ಬಯಲಾಗಿದ್ದು ಬಳಿಕ ಸತ್ಯ ಒಪ್ಪಿಕೊಂಡಿದ್ದಾನೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!