ಭಾರತದ ಗ್ರಾಮೀಣ ಭಾಗದಲ್ಲಿ ಶೇಕಡ 80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೆ ಅವಲಂಬಿಸಿದ್ದು, ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾಳೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ “ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ” ಕುರಿತು ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಸಚಿವರು ಮಾತನಾಡಿದ್ದಾರೆ. ಈ ವೇಳೆ ಸಚಿವರು ಪ್ರಗತಿಪರ ರೈತರಿಗೆ ಹಾಗೂ ಪ್ರಗತಿಪರ ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಿದ್ರು, ಬಳಿಕ ಕ್ರಾಪ್ ಇಂಪ್ರುಮೆಂಟ್, ಕ್ರಾಪ್ ಪ್ರೊಡಕ್ಷನ್, ಕ್ರಾಪ್ ಪ್ರೊಟೆಕ್ಷನ್ ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ.
ಜೆ.ಎಸ್.ಎಸ್ ಮಠ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಕೇವಲ ಮೈಸೂರು ಭಾಗದ ಮಕ್ಕಳಿಗೆ ಸೀಮಿತವಾಗದೆ ವಿವಿಧ ರಾಜ್ಯಗಳ ಮಕ್ಕಳು ಇಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಸಾಮಾಜಿಕ ಬದ್ಧತೆ ಹೊಂದಿರುವ ಜೆ ಎಸ್ ಎಸ್ ಸಂಸ್ಥೆ ಅಕ್ಷರ, ಅನ್ನದ ಜೊತೆಗೆ ಸಂಸ್ಕೃತಿಯನ್ನು ಕಲಿಸುತ್ತಿದೆ ಎಂದಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ವಾಟಾಳು ಸೂರ್ಯಸಿಂಹಾಸನ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು, ಕನಕಪುರದ ಶ್ರೀ ದೇಗುಲ ಮಠದ ಡಾ. ಶ್ರೀ ಚನ್ನಬಸವ ಸ್ವಾಮಿಗಳು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…