ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ವೈಟ್‌ಫೀಲ್ಡ್ನಲ್ಲಿ ಕಾರು ಅಡ್ಡಗಟ್ಟಿ ದಂಪತಿಗೆ ಬೆದರಿಕೆ; ಆರೋಪಿ ಅರೆಸ್ಟ್!

ಜನವರಿ 16ರಂದು ಹೂಡಿ ಜಂಕ್ಷನ್ ಬಳಿ ಕಾರೊಂದನ್ನು ಅಡ್ಡಗಟ್ಟಿ ಮಹಿಳೆಯರು ಮತ್ತು ಮಕ್ಕಳ ಮುಂದೆ ಚಾಕು ಪ್ರದರ್ಶಿಸಿ ಯುವಕನೊಬ್ಬ ಪುಂಡಾಟ ಮೆರೆದಿದ್ದ. ಇನ್ನು 25 ವರ್ಷದ ಆರ್.ಟಿ.ನಗರದ ಬಳಿಯ ಕನಕನಗರ ನಿವಾಸಿ ಮೀನು ಮಾರಾಟಗಾರ ಸೈಯದ್ ಅರ್ಬಾಜ್ ಖಾನ್‌ನನ್ನು ಪೊಲೀಸರು ಆತನ ವಾಹನ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆರೋಪಿ ಈ ಹಿಂದೆಯೂ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಈತ ಸಂಜೆ ಕಾಡುಗೋಡಿ ಬಳಿ ಕಾರಿನಲ್ಲಿ ಹೋಗುತ್ತಿದ್ದ ದಂಪತಿಯ ಜತೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದ. ನಂತರ ದಂಪತಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾರು ನಿಲ್ಲಿಸಿದ್ದಾಗ ಆರೋಪಿಯು ಬೈಕ್‌ನಿಂದ ಕೆಳಗಿಳಿದು ಬಂದು ನಡು ರಸ್ತೆಯಲ್ಲೆ ದಂಪತಿಯೊಂದಿಗೆ ಗಲಾಟೆ ಮಾಡಿದ್ದ. ಈ ವೇಳೆ ಅರ್ಬಾಜ್ ಖಾನ್, ದಂಪತಿಗೆ ಡ್ಯಾಗರ್ ತೋರಿಸಿ ಸ್ಥಳದಲ್ಲೆ ಅವರನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದು, ಅದರ ದೃಶ್ಯಾವಳಿಗಳು ದಂಪತಿಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು. ಇದರ ಬೆನ್ನಲ್ಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬೈಕ್‌ನ ನೋಂದಣಿ ಸಂಖ್ಯೆಯ ಸುಳಿವು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!